ETV Bharat / state

ಅಪಾಯಕಾರಿ ಸ್ಥಳಗಳಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗೆ ಅನುಮತಿ ನೀಡದಂತೆ ಡಿಸಿ ಸೂಚನೆ

author img

By

Published : Aug 5, 2020, 8:32 PM IST

ಜಿಲ್ಲೆಯಲ್ಲಿ ಮಳೆ ತೀವ್ರವಾಗುತ್ತಿದ್ದು, ಅಪಾಯಕಾರಿ ಮನೆ, ತಡೆಗೋಡೆ, ಕಟ್ಟಡ, ವಿದ್ಯುತ್ ಕಂಬಗಳನ್ನು ಗುರುತಿಸಿ ಅವುಗಳ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂದೆ ತಲೆದೋರಬಹುದಾದ ಅಪಾಯಗಳನ್ನು ಕಂಡುಹಿಡಿದರೆ, ಅನಿರೀಕ್ಷಿತ ಘಟನೆಗಳನ್ನು ಯಶಸ್ವಿಯಾಗಿ ಎದುರಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದರು.

Meeting
Meeting

ಮಂಗಳೂರು: ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದಿರುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆ, ನೆರೆ ಸೇರಿದಂತೆ ಪ್ರಾಕೃತಿಕ ದುರ್ಘಟನೆಗಳು ನಡೆದಾಗ ಅಂತಹ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡಗಳೇ ಕುಸಿದು, ಜೀವಹಾನಿಗೂ ಕಾರಣವಾಗುತ್ತಿವೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ ನಿರ್ಮಾಣ ಮಾಡುವ ಪ್ರವೃತ್ತಿ ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿವೆ. ಇವು ಹೆಚ್ಚು ಅಪಾಯಕಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ನಿರ್ಮಾಣ ಚಟುವಟಿಕೆಗೆ ಪರವಾನಿಗೆ ನೀಡಬಾರದೆಂದು ಸೂಚಿಸಿದರು.

ಜಿಲ್ಲೆಯಲ್ಲಿ ಮಳೆ ತೀವ್ರವಾಗುತ್ತಿದ್ದು, ಅಪಾಯಕಾರಿ ಮನೆ, ತಡೆಗೋಡೆ, ಕಟ್ಟಡ, ವಿದ್ಯುತ್ ಕಂಬಗಳನ್ನು ಗುರುತಿಸಿ ಅವುಗಳ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂದೆ ತಲೆದೋರಬಹುದಾದ ಅಪಾಯಗಳನ್ನು ಕಂಡುಹಿಡಿದರೆ, ಅನಿರೀಕ್ಷಿತ ಘಟನೆಗಳನ್ನು ಯಶಸ್ವಿಯಾಗಿ ಎದುರಿಸಬಹುದಾಗಿದೆ. ಪರಿಹಾರ ಕಾರ್ಯಾಚರಣೆಯಲ್ಲಿ ಯಾವುದೇ ವಿಳಂಬವನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕಳೆದ ವರ್ಷ ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ಸಿಕ್ಕಿದ್ದರೂ ಕೂಡ ಸದ್ಯ ಮನೆ ಪೂರ್ತಿ ನಿರ್ಮಾಣ ಆಗದಿರುವುದು ಕಂಡುಬಂದಿದೆ. ಈ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಫಲಾನುಭವಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಪರಿಹಾರ ಮೊತ್ತವನ್ನು ಸಕಾಲದಲ್ಲಿ ವಿತರಿಸುವಂತೆ ಸೂಚಿಸಿದರು.

ಮಳೆಗಾಲದಲ್ಲಿ ಡೆಂಗ್ಯೂ, ಚಿಕನ್‍ ಗುನ್ಯಾ ಇಲಿಜ್ವರದಂತಹ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಕೊರೊನಾ ವ್ಯಾಪಿಸಿದ್ದರೂ, ಇತರೆ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.