ETV Bharat / state

ವೆನ್ಲಾಕ್‍ ಜಿಲ್ಲಾಸ್ಪತ್ರೆಗೆ ದ.ಕ.ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ - Wenlock hospital

ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಸೋಮವಾರ ವೆನ್‍ಲಾಕ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ವೆನ್ಲಾಕ್‍ ಜಿಲ್ಲಾಸ್ಪತ್ರೆಗೆ ದ.ಕ.ಜಿಲ್ಲಾಧಿಕಾರಿ ಭೇಟಿ

author img

By

Published : Aug 24, 2020, 9:30 PM IST

ಮಂಗಳೂರು: ನಗರದ ವೆನ್‍ಲಾಕ್ ಆಸ್ಪತ್ರೆಯ ಕೋವಿಡ್ ವಿಭಾಗದ ವೈರಾಣು ಪ್ರಯೋಗ ಶಾಲೆ ಹಾಗೂ ಹೊರರೋಗಿಗಳ ವಿಭಾಗಕ್ಕೆ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋವಿಡ್ ಆಸ್ಪತ್ರೆಯಲ್ಲಿ ಹೆಚ್ಚುವರಿ ವೆಂಟಿಲೇಟರ್ ಅಳವಡಿಸಲು ಬೇಕಾಗುವ ಸಾಧನ ಸಲಕರಣೆಯನ್ನು ಅಗತ್ಯ ಸಮಯದಲ್ಲಿ ಒದಗಿಸಲಾಗುತ್ತದೆ‌. ಶುಶ್ರೂಷಕ ಸಿಬ್ಬಂದಿ ಹಾಗೂ ವೈದ್ಯರ ಕೊರತೆಗೆ ಆದ್ಯತೆಯ ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿ, ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ಆದೇಶಿಸಲಾಗುತ್ತದೆ. ಅಲ್ಲದೇ ಗಂಟಲು ದ್ರವ ಪರೀಕ್ಷೆಗೆ ವೈರಾಣು ಪ್ರಯೋಗ ಶಾಲೆಗೆ ಬೇಕಾಗುವ ಹೆಚ್ಚುವರಿ ಸಿಬ್ಬಂದಿಯನ್ನು ಒದಗಿಸಿಕೊಡುವ ಭರವಸೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಈ ಸಂದರ್ಭ ವೆನ್‍ಲಾಕ್ ಅಧೀಕ್ಷಕ ಡಾ.ಸದಾಶಿವ ಶ್ಯಾನುಭೋಗ, ಆರ್.ಎಂ.ಒ. ಡಾ.ಜೂಲಿಯಾನ ಸಾಲ್ಯಾನ್, ಡಾ.ಶರತ್, ಡಾ.ಜೆಸಿಂತಾ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.