ಮಂಗಳೂರು: ದುಬೈನಿಂದ ನಿನ್ನೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಸೇವೆಯಲ್ಲಿ ಲೋಪವಾಗಿರುವ ಹಿನ್ನೆಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಪತ್ರ ಮುಖೇನ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಆದರೆ ನಿನ್ನೆ ವಿಮಾನ ನಿಲ್ದಾಣದ ಸೇವೆಯಲ್ಲಿ ಲೋಪವಾಗಿದೆ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಅನಿವಾಸಿ ಭಾರತೀಯರ ವಿಮಾನಗಳ ಆಗಮನದ ಸಂದರ್ಭ ಸರಿಯಾದ ವ್ಯವಸ್ಥೆ ರೂಪಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.