ಮಂಗಳೂರು: ಮೀನುಗಾರಿಕೆ ಆರಂಭವಾಗುವ ಹಿನ್ನೆಲೆಯಲ್ಲಿ ನಗರದ ಮೀನುಗಾರಿಕಾ ಬಂದರಿಗೆ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೆಪ್ಟೆಂಬರ್ 1ರಿಂದ ಮೀನುಗಾರಿಕೆ ಆರಂಭಿಸಲು ಜಿಲ್ಲಾಡಳಿತ ಆದೇಶ ನೀಡಿದೆ. ಈ ಬಗ್ಗೆ ತೆಗೆದುಕೊಂಡ ಕ್ರಮಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಮತ್ತು ಮೀನುಗಾರ ಮುಖಂಡರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭ ಮೀನುಗಾರಿಕಾ ಉಪನಿರ್ದೇಶಕ ಪಾರ್ಶ್ವನಾಥ್ ಮತ್ತು ಮೀನುಗಾರ ಮುಖಂಡರಾದ ನಿತಿನ್ ಕುಮಾರ್, ಮೋಹನ್ ಬೆಂಗ್ರೆ, ಮನೋಹರ್ ಬೋಳೂರು, ಇಬ್ರಾಹೀಂ ಬೆಂಗ್ರೆ ಮತ್ತು ಎಸ್. ಇಬ್ರಾಹೀಂ ಜೊತೆಗಿದ್ದರು.