ಮಂಗಳೂರು : ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ಯುವತಿಯ ಮೃತದೇಹ, ಸಮುದ್ರ ಸೇರುವುದನ್ನು ತಪ್ಪಿಸಿ ಮೀನುಗಾರರು ದಡಕ್ಕೆ ತಂದು ಹಾಕಿದ್ದಾರೆ. ಇಂದು ಬೆಳಗ್ಗೆ ಹೊಯ್ಗೆ ಬಜಾರ್‌ನ ಕಡಲತೀರದಲ್ಲಿ ಈ ಘಟನೆ ನಡೆದಿದೆ.
ಮೀನುಗಾರಿಕೆ ನಡೆಸಲು ದಕ್ಕೆಗೆ ತೆರಳುತ್ತಿದ್ದ ಸ್ಥಳೀಯ ಮೀನುಗಾರರು ಯುವತಿಯ ಮೃತದೇಹ ನದಿಯಲ್ಲಿ ತೇಲಿ ಬರುತ್ತಿರುವುದನ್ನು ಕಂಡಿದ್ದಾರೆ. ತಕ್ಷಣ ಮೃತದೇಹವನ್ನು ದಡಕ್ಕೆ ತಂದು ಹಾಕಿ, ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಸರ್ಕಾರಿ ಜಿಲ್ಲಾಸ್ಪತ್ರೆ ವೆನ್ಲಾಕ್‌ನ ಶವಾಗಾರಕ್ಕೆ ಸಾಗಿಸಿದ್ದಾರೆ.
ಈವರೆಗೆ ಯುವತಿ ಗುರುತು ಪತ್ತೆಯಾಗಿಲ್ಲ. ಸುಮಾರು 5 ಅಡಿ ಎತ್ತರವಿರುವ ಯುವತಿ, ಕಪ್ಪು ಬಣ್ಣದ ಟೀಶರ್ಟ್, ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ಧಾರೆ. ಯುವತಿ ಒಂದು ಕೈಯಲ್ಲಿ ಕೆಂಪು ದಾರ ಮತ್ತು ಕಪ್ಪು ಬಳೆ ಧರಿಸಿದ್ದಾರೆ. ಮೇಲ್ನೋಟಕ್ಕೆ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ 12 ಕೆಜಿ ಚಿನ್ನ, 3 ಲಕ್ಷ ನಗದು ದರೋಡೆ
ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.