ಸುಬ್ರಹ್ಮಣ್ಯ : ರೈಲಿನಡಿ ತಲೆಯಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೆ (ನೆಟ್ಟಣ) ನಿಲ್ದಾಣದ ಬಳಿ ನಡೆದಿದೆ.
ಸೋಮವಾರ ರಾತ್ರಿ ವೇಳೆ ರೈಲ್ವೆ ಹಳಿಯ ಮೇಲೆ ಸ್ಥಳೀಯ ವ್ಯಕ್ತಿಯೊಬ್ಬ ನಡೆದುಕೊಂಡು ಹೋಗುತ್ತಿದ್ದ ವೇಳೆ ಮೃತದೇಹ ಕಂಡುಬಂದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹದ ಸಮೀಪದಲ್ಲಿ ಬ್ಯಾಂಕ್ ಪಾಸ್ ಬುಕ್ವೊಂದು ದೊರೆತಿದ್ದು, ಅದರಲ್ಲಿ ಮಂಗಳೂರಿನ ಉಳ್ಳಾಲ ರೈಲ್ವೇ ನಿಲ್ದಾಣ ಸಮೀಪದ ನಿವಾಸಿ ಪವನ್ ಕುಮಾರ್ ಎಂಬ ವಿಳಾಸ ಪತ್ತೆಯಾಗಿದೆ.
ಇನ್ನು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗೆ ಸುಮಾರು ಮೂವತ್ತು ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ.