ಮಂಗಳೂರು: ಕೊರೊನಾ ಸೋಂಕಿತನಾಗಿದ್ದ ಜಾದೂಗಾರರೊಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಮಂಗಳೂರಿನ 35 ವರ್ಷದ ಈ ಜಾದೂಗಾರ ಅಮೆರಿಕದಲ್ಲಿ ನಾಲ್ಕು ವರ್ಷಗಳ ಕಾಲ ಜಾದೂಗಾರರಾಗಿ ಮನರಂಜಿಸಿದ್ದರು. ಇವರು ತೀವ್ರ ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ದೃಢಪಟ್ಟಿತ್ತು. ಕೊರೊನಾ ಸೋಂಕಿತರಾಗಿ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹಾಗೂ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.