ಮಂಗಳೂರು: ಒಮನ್ ಸುಲ್ತಾನ ಕಬೂಸ್ ಬಿನ್ ಸೈದ್ ಅಲ್ ಸೈದ್ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಕರಾವಳಿ ಉತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದರು.
ಒಮನ್ ದೇಶದ ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್ ನಿಧನರಾಗಿದ್ದು, ಅವರ ಗೌರವಾರ್ಥ ಜ.13 ರಂದು ದೇಶಾದ್ಯಂತ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಕರಾವಳಿ ಉತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.