ETV Bharat / state

'ಎಸ್‌ಸಿ-ಎಸ್‌ಟಿ ಜನಾಂಗದ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರ ಶೀಘ್ರ ತಲುಪಿಸಿ' - ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ

ಡಿಸಿ ಮನ್ನಾ ಜಾಗದಲ್ಲಿ ಅಕ್ರಮ, ಅತಿಕ್ರಮಣ ಮಾಡಿ ಯಾವುದೇ ಕಟ್ಟಡ ನಿರ್ಮಾಣ ಮಾಡಲು ಮುಂದಾದಲ್ಲಿ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಪ್ರಾಧಿಕಾರದವರು ಲೈಸೆನ್ಸ್ ನೀಡಬಾರದು. ಅದನ್ನು ಉಲ್ಲಂಘಿಸಿ ನಿರ್ಮಾಣ ಮಾಡಿದ್ದಲ್ಲಿ ಅಂತಹ ಕಟ್ಟಡಕ್ಕೆ ವಿದ್ಯುಚ್ಛಕ್ತಿ ಸೌಲಭ್ಯ, ನೀರಿನ ಸೌಲಭ್ಯ ಹಾಗೂ ಟ್ರೇಡ್ ಲೈಸೆನ್ಸ್​​​ ನೀಡಬಾರದು..

Deliver redress to victims of assault case without delay: dakshina kannada dc
'ಪ.ಜಾ ಮತ್ತು ಪ.ಪಂಗಡದವರ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರವನ್ನು ವಿಳಂಬ ಮಾಡದೇ ತಲುಪಿಸಿ'
author img

By

Published : Feb 5, 2021, 11:44 AM IST

ಮಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರವನ್ನು ವಿಳಂಬವಿಲ್ಲದೇ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಕಾಯ್ದೆ 1989) ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಸಫಾಯಿ ಕರ್ಮಚಾರಿಗಳ ನಿಷೇಧ ಮತ್ತು ಪುನರ್ವಸತಿಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ಚುರುಕಾಗಿ ಕೈಗೊಂಡು ಅವರುಗಳಿಗೆ ನ್ಯಾಯ ಒದಗಿಸಬೇಕು. ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 51 ದೌರ್ಜನ್ಯ ಪ್ರಕರಣ ವರದಿಯಾಗಿವೆ. 33 ಪ್ರಕರಣಗಳಲ್ಲಿ 27.53 ಲಕ್ಷದಷ್ಟು ಪರಿಹಾರದ ಹಣ ನೀಡಲಾಗಿದೆ ಎಂದರು.

ಉಳಿದ 14 ಪ್ರಕರಣಗಳಿಗೆ ಸಂಬಧಿಸಿದಂತೆ ಶೀಘ್ರ ಪರಿಹಾರ ನೀಡುವುದರ ಜೊತೆಗೆ ತನಿಖೆಗಳನ್ನು ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪನ ಪತ್ರಗಳನ್ನು ಸಲ್ಲಿಸಬೇಕೆಂದು ಹೇಳಿದರು. ಜಿಲ್ಲೆಯಲ್ಲಿ ಡಿಸಿ ಮನ್ನಾ ಜಮೀನುಗಳ ಬಗ್ಗೆ ನಿಖರವಾದ ಮಾಹಿತಿಗಳನ್ನು ಕ್ರೊಢೀಕರಿಸಬೇಕು.

ಅವುಗಳಲ್ಲಿ ಲಭ್ಯವಿರುವುದು, ಅತಿಕ್ರಮಣವಾಗಿರುವುದು ಎಲ್ಲದರ ಬಗ್ಗೆ ಮಾಹಿತಿ ಸಂಗ್ರಹಿಸಿ ಉಳ್ಳವರು ಇದ್ದಲ್ಲಿ ಅವರನ್ನು ತೆರವುಗೊಳಿಸಬೇಕು ಎಂದರು. ಲಭ್ಯವಿರುವ ಜಮೀನುಗಳನ್ನು ನಿವೇಶನಗಳಾಗಿ ಪರಿವರ್ತಿಸಿ ಶೋಷಿತರು ಹಾಗೂ ನೊಂದವರಿಗೆ ಆದ್ಯತೆ ಮೇಲೆ ನಿವೇಶನ ನೀಡಬೇಕೆಂದು ತಿಳಿಸಿದರು.

ಜಾತಿ ಪ್ರಮಾಣ ಪತ್ರವನ್ನು ಕೆಲವು ಪ್ರಕರಣಗಳಲ್ಲಿ ನೀಡುತ್ತಿಲ್ಲ ಎಂಬ ಬಗ್ಗೆ ದೂರು ಕೇಳಿ ಬರುತ್ತಿದೆ. ನಿಖರ ದಾಖಲೆಗಳು ಇಲ್ಲವಾದಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ, ಮಹಜರು ಹಾಗೂ ಅವರುಗಳ ಆಚಾರ-ವಿಚಾರಗಳು ಮತ್ತು ಸಂಪ್ರದಾಯಗಳ ಬಗ್ಗೆ ಪರಿಶೀಲಿಸಿ ಅರ್ಹರಿದ್ದಲ್ಲಿ ಪ್ರಮಾಣ ಪತ್ರ ನೀಡಬೇಕು ಎಂದು ಸೂಚಿಸಿದರು.

ಈ ಸುದ್ದಿಯನ್ನೂ ಓದಿ: ಮತ್ತಷ್ಟು ಕುತೂಹಲ ಕೆರಳಿಸಿದ ಮೂರುಸಾವಿರಮಠದ ಗೌಪ್ಯ ಸಭೆ

ಡಿಸಿ ಮನ್ನಾ ಜಾಗದಲ್ಲಿ ಅಕ್ರಮ, ಅತಿಕ್ರಮಣ ಮಾಡಿ ಯಾವುದೇ ಕಟ್ಟಡ ನಿರ್ಮಾಣ ಮಾಡಲು ಮುಂದಾದಲ್ಲಿ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಪ್ರಾಧಿಕಾರದವರು ಲೈಸೆನ್ಸ್ ನೀಡಬಾರದು. ಅದನ್ನು ಉಲ್ಲಂಘಿಸಿ ನಿರ್ಮಾಣ ಮಾಡಿದ್ದಲ್ಲಿ ಅಂತಹ ಕಟ್ಟಡಕ್ಕೆ ವಿದ್ಯುಚ್ಛಕ್ತಿ ಸೌಲಭ್ಯ, ನೀರಿನ ಸೌಲಭ್ಯ ಹಾಗೂ ಟ್ರೇಡ್ ಲೈಸೆನ್ಸ್​​​ ನೀಡಬಾರದೆಂದು ಅಧಿಕಾರಿಗಳಿಗೆ ಸೂಚಿಸಿದರು.

ಶೋಷಣೆ ಮಾಡಿದವರಿಗೆ ಕಾನೂನಿನಡಿ ಆಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಯುವ ಜನರು ಮಾದಕ ವಸ್ತುಗಳ ವ್ಯಸನಿಗಳಾಗುವುದನ್ನು ತಪ್ಪಿಸಲು ಸಹ ಜಾಗೃತಿ ಮೂಡಿಸಬೇಕು ಎಂದರು.

ಪೌರ ಕಾರ್ಮಿಕರು ತಮ್ಮ ಕಾರ್ಯಗಳನ್ನು ಕೈಗೊಳ್ಳುವಾಗ ಸುರಕ್ಷತಾ ಸಾಧನಗಳನ್ನು ತಪ್ಪದೇ ಬಳಸಬೇಕು. ಮ್ಯಾನುವಲ್ ಸ್ಕ್ಯಾವೆಂಜರ್​​​ಗಳನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಅವುಗಳ ಸ್ವಚ್ಛತಾ ಕಾರ್ಯಗಳನ್ನು ಯಂತ್ರಗಳ ಬಳಕೆಯಿಂದ ಮಾತ್ರ ಮಾಡಬೇಕು. ನಿಯಮ ಉಲ್ಲಂಘಿಸುವುದು ಕಂಡು ಬಂದಲ್ಲಿ ಅಧಿಕಾರಿಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.