ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮತೀಯ ಹತ್ಯೆಗಳ ಮರು ತನಿಖೆಗೆ ಒತ್ತಾಯ

ದಕ್ಷಿಣ ಕನ್ನಡದಲ್ಲಿ ನಡೆದ ಕೋಮು ಹತ್ಯೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್ ಹಾಗೂ ಹತ್ಯೆಯಾದ ಬೆಳ್ಳಾರೆಯ ಮಸೂದ್ ತಾಯಿ ಸಾರಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದ್ದಾರೆ.

dakshina kannada
ಹತ್ಯೆಯಾದ ಬೆಳ್ಳಾರೆಯ ಮಸೂದ್ ತಾಯಿ ಸಾರಾ
author img

By

Published : May 30, 2023, 10:29 AM IST

ಹತ್ಯೆಯಾದ ಬೆಳ್ಳಾರೆಯ ಮಸೂದ್ ತಾಯಿ ಸಾರಾ

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಧರ್ಮಾಧಾರಿತ ಹಾಗೂ ರಾಜಕೀಯ ದ್ವೇಷದ ಹತ್ಯೆ ಪ್ರಕರಣಗಳ ಮರು ತನಿಖೆಗೆ ಒತ್ತಾಯ ಕೇಳಿ ಬರುತ್ತಿದೆ. "ಹತ್ಯೆಯ ವಿಚಾರದಲ್ಲಿ ಬಿಜೆಪಿ ಸರ್ಕಾರದಿಂದಾದ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಡುವಂತೆ" ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದೆ.

ಈ ಬಗ್ಗೆ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್ ಹಾಗೂ ಹತ್ಯೆಯಾದ ಬೆಳ್ಳಾರೆಯ ಮಸೂದ್ ತಾಯಿ ಸಾರಾ ಮನವಿ ಪತ್ರ ನೀಡಿದ್ದಾರೆ. ಕಳೆದ ವರ್ಷ ಬೆಳ್ಳಾರೆಯ ಮಸೂದ್, ಪ್ರವೀಣ್ ನೆಟ್ಟಾರು, ಸುರತ್ಕಲ್ ಮಂಗಳಪೇಟೆಯ ಫಾಝಿಲ್, ಕಾಟಿಪಳ್ಳದ ಜಲೀಲ್ ಹಾಗೂ ಕನ್ಯಾಡಿಯ ಕಾಂಗ್ರೆಸ್ ಕಾರ್ಯಕರ್ತ ದಿನೇಶ್ ಹತ್ಯೆ ನಡೆದಿತ್ತು. ಇದೆಲ್ಲವೂ ಜಿಲ್ಲೆಯಲ್ಲಿ ಧರ್ಮಾಧಾರಿತ ಹಾಗೂ ರಾಜಕೀಯ ದ್ವೇಷದ ಕಾರಣಕ್ಕಾಗಿ ನಡೆದ ಕೊಲೆಗಳಾಗಿವೆ.

ಆದರೆ ಬಿಜೆಪಿ ಸರ್ಕಾರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಮಾತ್ರ ಗಂಭೀರವಾಗಿ ಪರಿಗಣಿಸಿ ಅವರ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿತ್ತು. ಅಲ್ಲದೇ ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆಯನ್ನು ಎನ್ಐಎ ನೀಡಿತ್ತು. ಆದರೆ ಉಳಿದ 4 ಪ್ರಕರಣಗಳನ್ನು ಕಡೆಗಣಿಸಿತ್ತು. ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ದೊರೆತ ಸರ್ಕಾರದ ಸಾಂತ್ವಾನ ಹಾಗೂ ಪರಿಹಾರ ಉಳಿದ ಕುಟುಂಬಗಳಿಗೆ ದೊರಕಿರಲಿಲ್ಲ. ಆದ್ದರಿಂದ ಹಿಂದಿನ ಸರ್ಕಾರದಿಂದ ಆಗಿರುವ ತಾರತಮ್ಯ ಹಾಗೂ ಅನ್ಯಾಯವನ್ನು ಸರಿಪಡಿಸಿ ಕಾಂಗ್ರೆಸ್ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ.

ಈ ನಾಲ್ಕು ಹತ್ಯೆಯ ಪ್ರಕರಣವನ್ನು ಮರು ತನಿಖೆಗೊಳಪಡಿಸಿ ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಅಲ್ಲದೇ ಎಸ್ಐಟಿ ರಚಿಸಿ ತನಿಖೆ ನಡೆಸಬೇಕು. ನಾಲ್ವರ ಕುಟುಂಬಕ್ಕೂ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು. ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗ ಕಲ್ಪಿಸಿದಂತೆ ಈ ನಾಲ್ವರ ಕುಟುಂಬಸ್ಥರಿಗೂ ಸರ್ಕಾರ ಉದ್ಯೋಗ ಕೊಡಿಸಬೇಕು. ಫಾಝಿಲ್ ಕೊಲೆಪ್ರಕರಣದಲ್ಲಿ ವಿಹೆಚ್​​ಪಿ ಮುಖಂಡ ಶರಣ್ ಪಂಪ್ ವೆಲ್ ಅವರನ್ನು ಆರೋಪಿಯನ್ನಾಗಿಸಿ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗಿದೆ.

ಇದನ್ನೂ ಓದಿ: ವರ್ಷದ ಹಿನ್ನೋಟ: ದ.ಕನ್ನಡದಲ್ಲಿ ಧರ್ಮ ಸಂಘರ್ಷ, ಹಿಜಾಬ್‌, ನೈತಿಕ ಪೊಲೀಸ್‌ಗಿರಿ

ವರ್ಷದಲ್ಲಿ ನಾಲ್ಕು ಹತ್ಯೆ: 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷಕ್ಕೆ ನಾಲ್ವರು ಬಲಿಯಾಗಿದ್ದರು. ಬೆಳ್ಳಾರೆಯಲ್ಲಿ ಮೊಹಮ್ಮದ್ ಮಸೂದ್ ಎಂಬಾತನ ಕೊಲೆಯ ಮೂಲಕ ಹತ್ಯೆಗಳ ಸರಣಿ ಮುಂದುವರೆದಿದ್ದವು. ಬೆಳ್ಳಾರೆಯಲ್ಲಿ ದಿಟ್ಟಿಸಿ ನೋಡಿದ ಕಾರಣಕ್ಕಾಗಿ ಪಕ್ಷದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿತ್ತು.‌ ಗಂಭೀರ ಗಾಯಗೊಂಡಿದ್ದ ಮಸೂದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಇದಕ್ಕೆ ಪ್ರತಿಕಾರವಾಗಿ ನಡೆದದ್ದು ಪ್ರವೀಣ್ ನೆಟ್ಟಾರ್ ಹತ್ಯೆ. ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ನನ್ನು ಪಿಎಫ್ಐನ ತಂಡವೊಂದು ಹತ್ಯೆ ಮಾಡಿತ್ತು. ಇದು ರಾಷ್ಟಮಟ್ಟದ ಸುದ್ದಿಯಾಗಿತ್ತು. ಪ್ರವೀಣ್ ನೆಟ್ಟಾರ್ ಹತ್ಯೆಯ ಸಂದರ್ಭದಲ್ಲಿ ಆಕ್ರೋಶಿತ ಕಾರ್ಯಕರ್ತರ ಗುಂಪು ಬಿಜೆಪಿ ರಾಜ್ಯಾಧ್ಯಕ್ಷರ ಕಾರನ್ನೆ ಅಲುಗಾಡಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯು ನಡೆದಿತ್ತು.

ಈ ಘಟನೆ ಮಾಸುವ ಮುನ್ನವೇ ಪ್ರವೀಣ್ ನೆಟ್ಟಾರ್ ಹತ್ಯೆಗೆ ಪ್ರತೀಕಾರವಾಗಿ ಮಂಗಳೂರಿನ ಸುರತ್ಕಲ್ ನಲ್ಲಿ ಫಾಝಿಲ್ ಎಂಬಾತನ ಹತ್ಯೆ ನಡೆದಿತ್ತು. ಈ ಮೂರು ಸರಣಿ ಹತ್ಯೆಗಳು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಸರಣಿ ಕೊಲೆಗಳು ನಡೆದ ಬಳಿಕ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿ ನೆಮ್ಮದಿ ಮೂಡುತ್ತಿದ್ದಾಗ ವರ್ಷದ ಕೊನೆಯಲ್ಲಿ ಮತ್ತೊಂದು ಕೊಲೆಯಾಗಿತ್ತು. ಸುರತ್ಕಲ್​​​ನಲ್ಲಿ ಅಂಗಡಿಯಲ್ಲಿದ್ದ ಜಲೀಲ್ ಎಂಬವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿತ್ತು. ಕೊಲೆ ಕೋಮು ದ್ವೇಷದ ಕೊಲೆಯೆಂದೇ ಬಿಂಬಿತವಾಗಿತ್ತು.

ಇದನ್ನೂ ಓದಿ: ಮಂಗಳೂರು.. ಈ ವರ್ಷ ದ್ವೇಷಕ್ಕಾಗಿ ನಡೆದವಾ ನಾಲ್ಕು ಕೊಲೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.