ETV Bharat / state

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ದಕ್ಷಿಣ ಕನ್ನಡದ ಹಲವೆಡೆ ಮಳೆ - ಭಾರೀ ಮಳೆ

ಮುಂದಿನ 5 ದಿನಗಳವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Depression in Arabian sea: Heavy rain across Dakshina Kannada
ವಾಯುಭಾರ ಕುಸಿತ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ‌ ಉತ್ತಮ ಮಳೆ
author img

By ETV Bharat Karnataka Team

Published : Jan 4, 2024, 9:44 AM IST

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಬುಧವಾರ ಮಧ್ಯರಾತ್ರಿ ಮತ್ತು ಬೆಳಗ್ಗಿನ ಜಾವದಿಂದ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ದಿನವಿಡೀ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇತ್ತು. ಇಂದು ಕೂಡ ಮಳೆ ಮುಂದುವರೆದಿದೆ.

ವಾಯಭಾರ ಕುಸಿತ ಉಂಟಾಗಿದ್ದು, ಆಗ್ನೇಯ ಭಾಗದ ಅರಬ್ಬಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಸುಳಿಗಾಳಿ ಸೃಷ್ಟಿಯಾಗಿದೆ. ಇದರಿಂದಾಗಿ ನಿಮ್ನ ಒತ್ತಡ ನಿರ್ಮಾಣ ಆಗಿದೆ. ಪರಿಣಾಮ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯಿಂದ ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಮುಂದಿನ 5 ದಿನಗಳವರೆಗೆ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 5 ದಿನಗಳಲ್ಲಿ ಕರ್ನಾಟಕ ರಾಜ್ಯದ ಹಲವೆಡೆ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕಾಂಗೋದಲ್ಲಿ ಭಾರಿ ಮಳೆ, ಪ್ರವಾಹ: ಒಂದೇ ಕುಟುಂಬದ 10 ಮಂದಿ ಸೇರಿ 22 ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.