ETV Bharat / state

ವೀರೇಂದ್ರ ಹೆಗ್ಗಡೆ ಬಗ್ಗೆ ಸುಳ್ಳು ಸುದ್ದಿ ಪ್ರಕರಣ: ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಸೋಮನಾಥ್ ನಾಯಕ್​ಗೆ​ ಶಿಕ್ಷೆ - Somnath Naik surrendered

ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಸಂಸ್ಥೆ ವಿರುದ್ಧ ಅಪಪ್ರಚಾರ ನಡೆಸಿದ ಪ್ರಕರಣ ಹಿನ್ನೆಲೆ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷರು ಜೈಲು ಸೇರಿದ್ದಾರೆ.

Derogatory Post on Veerendra Heggade: Somnath Naik surrendered to the court

author img

By

Published : Nov 1, 2022, 4:04 PM IST

ಬೆಳ್ತಂಗಡಿ(ದಕ್ಷಿಣ ಕನ್ನಡ) : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸಂಸ್ಥೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಬರವಣಿಗೆ ಮತ್ತು ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಸೇವಾ ಟ್ರಸ್ಟ್​ನ ಅಧ್ಯಕ್ಷ ಸೋಮನಾಥ್ ನಾಯಕ್​ಗೆ ಮೂರು ತಿಂಗಳ ಸಜೆ ಹಾಗೂ 4.5 ಲಕ್ಷ ಪರಿಹಾರ ನೀಡುವಂತೆ ತೀರ್ಪು ನೀಡಿದ್ದ ಬೆಳ್ತಂಗಡಿ ಕೋರ್ಟ್​ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಸೋಮವಾರ CJ ಮತ್ತು JMFC ಬೆಳ್ತಂಗಡಿ ನ್ಯಾಯಾಧೀಶರಾದ ವಿಜಯೇಂದ್ರರ ಮುಂದೆ ಸೋಮನಾಥ್ ನಾಯಕ್ ಹಾಜರಾಗಿದ್ದು, ಬೆಳ್ತಂಗಡಿ ಕೋರ್ಟ್​ನಿಂದ ಅವರನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಹೆಗ್ಗಡೆಯವರ ಬಗ್ಗೆ ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಬರಹಗಳನ್ನು ಬರೆದಿದ್ದರು ಎಂಬ ಆರೋಪ ಇವರ ಮೇಲಿತ್ತು.

ಶ್ರೀ ಕ್ಷೇತ್ರ ಧರ್ಮಸ್ಥಳ ಅಥವಾ ಸಂಸ್ಥೆಯ ಕುರಿತು ಗೌರವಕ್ಕೆ ಚ್ಯುತಿ ತರುವಂತಹ ಯಾವುದೇ ಬರವಣಿಗೆ ಅಥವಾ ಹೇಳಿಕೆ ನೀಡದಂತೆ ಬೆಳ್ತಂಗಡಿ ನ್ಯಾಯಾಲಯವು ನಾಯಕ್ ಸೇರಿದಂತೆ ಐದು ಜನರಿಗೆ ಈ ಹಿಂದೆಯೇ ಆದೇಶ ಮಾಡಿತ್ತು. ಆದ್ರೆ ಇದನ್ನು ಮೀರಿ ಮತ್ತೆ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ವೈರಲ್ ಮಾಡಿರುವುದಕ್ಕಾಗಿ ಅದೇ ಕೋರ್ಟ್​ನಲ್ಲಿ ಖಾಸಗಿ ದೂರು ದಾಖಲಾಗಿತ್ತು.

Derogatory Post on Veerendra Heggade: Somnath Naik surrendered to the court
ಕೋರ್ಟಿಗೆ ಶರಣಾದ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಸೋಮನಾಥ್ ನಾಯಕ್

ಈ ಬಗ್ಗೆ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಸೋಮನಾಥ್ ನಾಯಕ್ ದೋಷಿ ಎಂದು ಪರಿಗಣಿಸಿ ಮೂರು ತಿಂಗಳ ಸಜೆ ಮತ್ತು 4.5 ಲಕ್ಷ ಪರಿಹಾರ ನೀಡಬೇಕೆಂದು ಆದೇಶ ಮಾಡಿತ್ತು. ಅದಲ್ಲದೆ ಸೋಮನಾಥ್ ನಾಯಕ್ ಸೇರಿದ ಆಸ್ತಿ ಸಹ ಮುಟ್ಟುಗೋಲು ಹಾಕಿಕೊಂಡಿತ್ತು.

ಆದರೆ, ಬೆಳ್ತಂಗಡಿ ನ್ಯಾಯಲಯದ ತೀರ್ಪು ಪ್ರಶ್ನಿಸಿ ನಾಯಕ್, ತಮ್ಮ ವಕೀಲರ ಮೂಲಕ ಹೈಕೋರ್ಟ್, ಸುಪ್ರೀಂಕೋರ್ಟ್ ಬಾಗಿಲು ತಟ್ಟಿದ್ದರು. ನ್ಯಾಯಾಲಯ ಅವರು ಸಲ್ಲಿಸಿದ್ದ ಅಪೀಲನ್ನು ವಜಾ ಮಾಡಿ ಬೆಳ್ತಂಗಡಿ ನ್ಯಾಯಾಲಯದ ನೀಡಿದ್ದ ಅದೇಶವನ್ನೇ ಎತ್ತಿಹಿಡಿದಿದೆ.

ಹೀಗಾಗಿ ಸುಮಾರು 70ಕ್ಕೂ ಅಧಿಕ ಬೆಂಬಲಿಗರ ಸಮ್ಮುಖದಲ್ಲಿ ಸೋಮವಾರ ಬೆಳ್ತಂಗಡಿ ಕೋರ್ಟ್​ಗೆ ಸೋಮನಾಥ್ ನಾಯಕ್ ಹಾಜರಾಗಿದ್ದರು. ಮಾಜಿ ಶಾಸಕ ಕೆ.ವಸಂತ ಬಂಗೇರ, ಚಿಂತಕರಾದ ಲಕ್ಷ್ಮೀಶ ತೋಳ್ಪಡಿತ್ತಾಯ, ರಂಜನ್ ರಾವ್ ಯರ್ಡೂರು, ಡಿಎಸ್ ಸ್ ಮುಖಂಡರು ಹಾಗೂ ಮತ್ತಿತರ ಸಂಘಟನೆಯ ಕಾರ್ಯಕರ್ತರು ಈ ವೇಳೆ ಜೊತೆಯಲ್ಲಿದ್ದರು.

ಇದನ್ನೂ ಓದಿ: ಚಾಮರಾಜನಗರ: ವೀರಭದ್ರೇಶ್ವರ ರಥೋತ್ಸವದಲ್ಲಿ ಮುರಿದುಬಿತ್ತು ತೇರು -Video

ETV Bharat Logo

Copyright © 2024 Ushodaya Enterprises Pvt. Ltd., All Rights Reserved.