ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ಜೆಡಿಎಸ್ ಪಕ್ಷವನ್ನು ಪ್ರೈವೇಟ್ ಲಿಮಿಟೆಡ್ ಪಾರ್ಟಿ ಎಂದು ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ದೇಶದ ಪ್ರಧಾನಮಂತ್ರಿ ಬಗ್ಗೆ ಮಾತಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನ ಸುರತ್ಕಲ್ ನ ಖಾಸಗಿ ಹೋಟೆಲ್ನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, ಅವರಿಗೆ ಮಾತನಾಡುವ ಸ್ವಾತಂತ್ರ್ಯ, ಅಧಿಕಾರ ಇದೆ ಮಾತನಾಡುತ್ತಾರೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಯೂನೀಫಾರ್ಮ್ ಸಿವಿಲ್ ಕೋಡ್ ಮಾಡುವ ಬಿಜೆಪಿ ಪ್ರಣಾಳಿಕೆ ಬಗ್ಗೆ ಅವರು ಪ್ರತಿಕ್ರಿಯಿಸಲಿಲ್ಲ. ಕಾಂಗ್ರೆಸ್ನ ಗ್ಯಾರಂಟಿ ಕಾರ್ಡ್ ಬಗ್ಗೆ ಪ್ರತಿಕ್ರಿಯಿಸಿದ ಹೆಚ್ಡಿಡಿ ಇದನ್ನು ಈ ಮೊದಲ ಗ್ಯಾರಂಟಿ ಕಾರ್ಡ್ ಇಲ್ಲದೆ ಕುಮಾರಸ್ವಾಮಿ ಮಾಡಿ ತೋರಿಸಿದ್ದಾರೆ. ರೈತರ ಸಾಲಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಂದು ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಅವರು ಹೇಳಿದರು.
2018 ನಾವು ಕಾಂಗ್ರೆಸ್ ಮನೆಗೆ ಹೋಗಿಲ್ಲ, ಅವರಾಗಿ ಬಂದರು. ಹಾಸನದಲ್ಲಿ ರಾಹುಲ್ ಗಾಂಧಿ ಅವರು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದರು. ಅದರ ದುಷ್ಪರಿಣಾಮ ಕಾಂಗ್ರೆಸ್ ಅನುಭವಿಸಬೇಕಾಗುತ್ತದೆ. ಜೆಡಿಎಸ್ ಬಗ್ಗೆ ಉತ್ತಮ ಅಭಿಪ್ರಾಯವಿದ್ದು, ಮೇ 13 ಕ್ಕೆ ನಮಗೆ ಮೆಜಾರಿಟಿ ಸಿಕ್ಕಿ ಸರ್ಕಾರ ರಚನೆ ಮಾಡುತ್ತೇವೆ. ಪಂಚರತ್ನ ಯಾತ್ರೆ ಬಗ್ಗೆ, ಕುಡಿಯುವ ನೀರು ಕೊಡುವ ಬಗ್ಗೆ ಮನೆ ಮನೆಗೆ ಹೋಗಿ ಮನದಟ್ಟು ಮಾಡಲಾಗಿದೆ ಎಂದರು.
ಇದನ್ನೂ ಓದಿ : ಎಲೆಕ್ಷನ್, ಸೆಲೆಕ್ಷನ್, ಕರೆಕ್ಷನ್ ನಮ್ಮ ಸೂತ್ರ.. 110 ಕ್ಷೇತ್ರದಲ್ಲಿ ಪ್ರಜಾಕೀಯ ಸ್ಪರ್ಧೆ - ಉಪೇಂದ್ರ ಮಾಹಿತಿ