ETV Bharat / state

ನರಿಮೊಗರು ಮೃತ್ಯುಂಜಯೇಶ್ವರ ದೇಗುಲದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

author img

By

Published : Jun 21, 2020, 4:17 AM IST

ಮುಂದಿನ ದಿನಗಳಲ್ಲಿ ದೇವಸ್ಥಾನದಲ್ಲಿ ನಿರ್ಮಾಣವಾಗಬೇಕಾದ ಪುಷ್ಕರಿಣಿ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಒದಗಿಸುವುದಾಗಿ ಶಾಸಕ ಸಂಜೀವ ಮಠಂದೂರು ಭರವಸೆ ನೀಡಿದರು.

puttur
ನರಿಮೊಗರು ಮೃತ್ಯುಂಜಯೇಶ್ವರ ದೇಗುಲ

ಮಂಗಳೂರು: ಗ್ರಾಮದ ಮುಂಡೂರು ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಇಂಟರ್‌ಲಾಕ್ ಹಾಗೂ ಮೇಲ್ಚಾವಣಿ ಕಾಮಗಾರಿ ಹಾಗೂ ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲಾಗಿದೆ.

ಶಾಸಕ ಸಂಜೀವ ಮಠಂದೂರು ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿ, ಹಿಂದೂ ಮನೋಭಾವದೊಂದಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ದೇವಸ್ಥಾನದ ಅಭಿವೃದ್ಧಿಯಲ್ಲಿ ತೊಡಗಿಕೊಂಡಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ದೇವಸ್ಥಾನದಲ್ಲಿ ನಿರ್ಮಾಣವಾಗಬೇಕಾದ ಪುಷ್ಕರಿಣಿ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಒದಗಿಸುವ ಭರವಸೆ ನೀಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಹೇಶ್ಚಂದ್ರ ಸಾಲಿಯಾನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಈಗಾಗಲೇ ದೇವಸ್ಥಾನದಲ್ಲಿ ಸಮಿತಿ ಸದಸ್ಯರು ಹಾಗೂ ಊರವರ ಸಹಕಾರದಿಂದ ಹಲವಾರು ಅಭಿವೃದ್ಧಿ ಕಾಮಗಾರಿಗಳಾದ ಮೇಲ್ಛಾವಣಿ, ಆವರಣ ಗೋಡೆ, ಇಂಟರ್‌ಲಾಕ್, ಜನರೇಟರ್ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನೂ ಕೆಲವೊಂದು ಕಾಮಗಾರಿಗಳು ನಡೆಯಬೇಕಿದೆ ಎಂದರು.

ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಒಳಚರಂಡಿ ಕಾಮಗಾರಿಗೆ ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.