ETV Bharat / state

ಉದಯ್​ಪುರ ಟೈಲರ್​ ಶಿರಚ್ಛೇದ ಪ್ರಕರಣ: ರಾಜ್ಯದಲ್ಲೂ ಕಟ್ಟೆಚ್ಚರಕ್ಕೆ ಡಿಜಿ ಪ್ರವೀಣ್ ಸೂದ್ ಸೂಚನೆ - DG Praveen Sood instructed to take action in the state

ರಾಜಸ್ಥಾನದ ಉದಯ್​ಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್​ ಶಿರಚ್ಛೇದದ ಬೆನ್ನಲ್ಲೇ ರಾಜ್ಯದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

dg-praveen-sood-instructed-to-higher-officers-regarding-rajasthan-murder-case
ಕನ್ಹಯ್ಯ ಲಾಲ್ ಹತ್ಯೆ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಡಿಜಿ ಪ್ರವೀಣ್ ಸೂದ್ ಸೂಚನೆ
author img

By

Published : Jun 29, 2022, 7:59 PM IST

ಬೆಂಗಳೂರು: ರಾಜಸ್ಥಾನದಲ್ಲಿ ಕನ್ಹಯ್ಯ ಲಾಲ್ ಅವರ ಶಿರಚ್ಛೇದ ಮಾಡಿ ಹತ್ಯೆಗೈದ ಬೆನ್ನಲ್ಲೇ ರಾಜ್ಯದಲ್ಲಿ ಹೈ ಆಲರ್ಟ್ ಆಗಿರುವಂತೆ‌ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಈ ಹಿಂದೆ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಉದಯ್​ಪುರದ ಟೈಲರ್​ ಕನ್ಹಯ್ಯ ಲಾಲ್ ಎಂಬವರು ಸೋಷಿಯಲ್‌ ಮೀಡಿಯಾದಲ್ಲಿ ಬೆಂಬಲದ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಬಟ್ಟೆ ಹೊಲಿಸಿಕೊಳ್ಳುವ ನೆಪದಲ್ಲಿ ಅಂಗಡಿಗೆ ಬಂದಿದ್ದ ಆರೋಪಿಗಳು ಮಾರಕಾಸ್ತ್ರಗಳಿಂದ‌ ಕನ್ಹಯ್ನ ಲಾಲ್ ಅವರನ್ನು ಶಿರಚ್ಛೇದ ಮಾಡಿ ಪರಾರಿಯಾಗಿದ್ದರು.

ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಹತ್ಯೆಯನ್ನು ಖಂಡಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ.‌ ಈ ಬಗ್ಗೆ ರಾಜ್ಯದಲ್ಲಿಯೂ ಎಚ್ಚರ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಡಿಜಿ ಪ್ರವೀಣ್ ಸೂದ್ ಸೂಚಿಸಿದ್ದಾರೆ. ಅನುಮತಿ ಇಲ್ಲದೆ ಮೆರವಣಿಗೆ, ಪ್ರತಿಭಟನೆ ನಡೆಯಬಾರದು. ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ಓದಿ : ಜುಲೈ 1 ರಿಂದ ಜೆಡಿಎಸ್ 'ಜನತಾ ಮಿತ್ರ': ಪೂರ್ವಭಾವಿ ಸಭೆ ನಡೆಸಿದ ಹೆಚ್​ಡಿಕೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.