ETV Bharat / state

ಸಿವಿಲ್ ನ್ಯಾಯಾಧೀಶೆಯಾಗಿ ಧರ್ಮಸ್ಥಳದ ಚೇತನಾ ಆಯ್ಕೆ - ಬೆಳ್ತಂಗಡಿ ಲೇಟೆಸ್ಟ್​ ನ್ಯೂಸ್

ಕರ್ನಾಟಕ ಉಚ್ಚ ನ್ಯಾಯಾಲಯದ ‌2020ನೇ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2021 ಫೆ.25ರಂದು ಹೊರಡಿಸಲಾದ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳ ಮೂಲದ ಚೇತನಾ‌ ಎಂಬುವವರು ಆಯ್ಕೆಯಾಗಿದ್ದಾರೆ.

ಧರ್ಮಸ್ಥಳದ ಚೇತನಾ
Dharmasthala Chetana
author img

By

Published : Feb 26, 2021, 1:45 PM IST

ಬೆಳ್ತಂಗಡಿ: ಕರ್ನಾಟಕ ಉಚ್ಚ ನ್ಯಾಯಾಲಯದ ‌2020ನೇ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2021 ಫೆ.25ರಂದು ಹೊರಡಿಸಲಾದ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ 29 ವರ್ಷದ ಚೇತನಾ‌ ಅವರು ಆಯ್ಕೆಯಾಗಿದ್ದಾರೆ.

ಧರ್ಮಸ್ಥಳದ ನಾರ್ಯ ಎಂಬ ಪುಟ್ಟಹಳ್ಳಿಯ ನಿವಾಸಿಗಳಾದ ರಾಮಣ್ಣ ಪೂಜಾರಿ ಮತ್ತು ತಾಯಿ ಸೀತಾ ದಂಪತಿಯ ಎರಡನೇ ಮಗಳು ಚೇತನಾ ಈ ಅಸಮಾನ್ಯ ಸಾಧನೆ ಮಾಡಿದ್ದಾರೆ.

ಇವರು ಉಪ್ಪಿನಂಗಡಿ ಸಮೀಪದ ಪೆರ್ನೆ, ಕನ್ಯಾಡಿಯ ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದು, ಪ್ರೌಢ ಶಿಕ್ಷಣವನ್ನು ಧರ್ಮಸ್ಥಳ ಶ್ರೀ. ಧ.ಮಂ.ಸೆಕೆಂಡರಿ ಶಾಲೆ, ಪದವಿ ಪೂರ್ವ ಶಿಕ್ಷಣವನ್ನು ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಗಿಸಿದ್ದಾರೆ.

ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ 2016ರಲ್ಲಿ ತಮ್ಮ ಕಾನೂನು ವಿದ್ಯಾಭ್ಯಾಸ ಪೂರ್ಣಗೊಳಿಸಿ ಬೆಳ್ತಂಗಡಿಯ ವಕೀಲರಾದ ಕೇಶವ ಪಿ. ಬೆಳಾಲು ಅವರ‌ ಕಚೇರಿಯಲ್ಲಿ ವಕೀಲ ವೃತ್ತಿ ಆರಂಭಿಸುತ್ತಾರೆ. ಬಳಿಕ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಬಿ.ಎ.ಪಾಟೀಲ್ ಅವರ ಕ್ಲಾರ್ಕ್ ರಿಸರ್ಚ್ ಅಸಿಸ್ಟೆಂಟ್ ಆಗಿ ಸುಮಾರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಓದಿ: 6ನೇ ದಿನಕ್ಕೆ ಕಾಲಿಟ್ಟ ಪಂಚಮಸಾಲಿ ಹೋರಾಟ: ಫ್ರೀಡಂ ಪಾರ್ಕ್​ನಲ್ಲಿ ಮುಂದುವರಿದ ಧರಣಿ

ಒಂದು ವರ್ಷದಿಂದ ನ್ಯಾಯವಾದಿ ಶಿವಪ್ರಸಾದ್ ಶಾಂತನಗೌಡರ್ ಕಚೇರಿಯಲ್ಲಿ ಕಿರಿಯ ವಕೀಲರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವೃತ್ತಿ ಜೀವನ‌ ನಡೆಸುತ್ತಿದ್ದರು. ಇದೀಗ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ‌ ಸಿವಿಲ್‌ ನ್ಯಾಯಾಧೀಶ ಹುದ್ದೆಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಜನಿಸಿದರೂ ಅವಿರತ ಶ್ರಮ ಹಾಗೂ ಪ್ರಯತ್ನದ ಮೂಲಕ‌ ಅಸಾಮಾನ್ಯ ಸಾಧನೆ‌ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.