ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಿನ್ನೆ ಮೃತಪಟ್ಟ ಕೊರೊನಾ ಸೋಂಕಿತ ಮಹಿಳೆಯ ಅಂತ್ಯಸಂಸ್ಕಾರವನ್ನು ಸ್ಥಳೀಯರ ಆಕ್ಷೇಪದ ನಡುವೆ ಮಂಗಳೂರಿನ ಬೋಳಾರ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಗಿದೆ.
ಎಸಿ ಮದನ್ ಮೋಹನ್ ಹಾಗೂ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್ ಅವರ ನೇತೃತ್ವದಲ್ಲಿ ಮೃತ ಸೋಂಕಿತೆಯ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇದಕ್ಕೂ ಮುನ್ನ ಬೋಳಾರ ಚಿತಾಗಾರ ಸಮೀಪದ ನಿವಾಸಿಗಳು ಇಲ್ಲಿ ಅಂತ್ಯಸಂಸ್ಕಾರ ನೆರವೇರಿಸಬಾರದೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಅಧಿಕಾರಿಗಳು ಸ್ಥಳೀಯರ ಮನವೊಲಿಸಿ ಬೋಳಾರದ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮುಗಿಸಿದರು.
ಮೃತದೇಹದ ಅಂತ್ಯ ಸಂಸ್ಕಾರ ನೆರವೇರಿಸಲು ಮಹಿಳೆಯ ಪತಿ ಹಾಗೂ ಪುತ್ರನಿಗೆ ಅವಕಾಶ ನೀಡಲಾಗಿತ್ತು.