ETV Bharat / state

ಕೊರೊನಾ ಆತಂಕ: ಕಾಸರಗೋಡು-ಮಂಗಳೂರು ನಡುವಿನ ವಾಹನ ಸಂಚಾರ ನಿಷೇಧಿಸಿ ಆದೇಶ - Dhakshina kannada and Kasaragod

ಕೊರೊನಾ ಆತಂಕದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ಕಾಸರಗೋಡು ಮಧ್ಯೆ ಸಂಚರಿಸುವ ಎಲ್ಲಾ ವಾಹನಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

manglore
ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್
author img

By

Published : Mar 21, 2020, 1:25 AM IST

Updated : Mar 21, 2020, 2:20 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಸಾಕಷ್ಟು ಮುಂಜಾಗ್ರತೆ ವಹಿಸಿದ್ದು, ಇದೀಗ ಜಿಲ್ಲೆಯಲ್ಲಿ ಹಾಗೂ ಕೇರಳ ರಾಜ್ಯದ ಕಾಸರಗೋಡು ಮಧ್ಯೆ ಸಂಚರಿಸುವ ಎಲ್ಲ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.

manglore
ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ

ಈ ನಿಷೇಧವು ಇಂದು ಮಧ್ಯಾಹ್ನ 2 ಗಂಟೆಯಿಂದ ಮಾರ್ಚ್ 31 ಮಧ್ಯರಾತ್ರಿ 12ರವರೆಗೆ ಜಾರಿಯಲ್ಲಿರುತ್ತದೆ. ಕಾಸರಗೋಡು ಜಿಲ್ಲೆಯಲ್ಲಿ ಈಗಾಗಲೇ 6 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಆದ್ದರಿಂದ ಕಾಸರಗೋಡು ಹಾಗೂ ಮಂಗಳೂರು ನಡುವೆ ಸಾಕಷ್ಟು ಮಂದಿ ಕೆಲಸದ ನಿಮಿತ್ತ ಆಗಮಿಸುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಕೇರಳ ಗಡಿ ಭಾಗ ಕಾಸರಗೋಡು ನಡುವೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳನ್ನು ನಿಷೇಧಿಸಿ ಸಿಆರ್​ಪಿಸಿ ಸೆಕ್ಷನ್ 144(3) ರ ಪ್ರದತ್ತವಾದ ಅಧಿಕಾರವನ್ನು ಬಳಸಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.

ಆದರೆ ಯಾವುದೇ ತುರ್ತು ಪ್ರಕರಣ ಇದ್ದಲ್ಲಿ ತಲಪಾಡಿ ಚೆಕ್ ಪೋಸ್ಟ್​​ವರೆಗೆ ಮಾತ್ರ ಬರಲು ಅವಕಾಶ ಕಲ್ಪಿಸಲಾಗಿದೆ. ಅದರ ಈಚೆಗೆ ಸಂಚಾರ ಮಾಡಲು ನಿಷೇಧಿಸಲಾಗಿದೆ.

Last Updated : Mar 21, 2020, 2:20 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.