ETV Bharat / state

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೊಕ್ಸೊ ಕಾಯ್ದೆಯಡಿ ದೈಹಿಕ ಶಿಕ್ಷಣ ನಿರ್ದೇಶಕನ ಬಂಧನ - ಲೈಂಗಿಕ ಕಿರುಕುಳ

ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಎಂಬಾತರನ್ನು ಬಂಧಿಸಲಾಗಿದೆ.

director-of-physical-education-arrested-for-allegation-of-sexual-abuse-on-minor
ಫೋಕ್ಸೊ ಕಾಯ್ದೆಯಡಿ ದೈಹಿಕ ಶಿಕ್ಷಣ ನಿರ್ದೇಶಕನ ಬಂಧನ
author img

By

Published : Oct 26, 2021, 12:26 PM IST

ಪುತ್ತೂರು (ದ.ಕ): ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಗಂಭೀರ ಆರೋಪದಡಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೊಕ್ಸೊ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು. ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಅ.25ರಂಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಚಾಕು ಇರಿದು ಅಪಘಾತವೆಂದು ಬಿಂಬಿಸಿದ ಆರೋಪ: ಮೂವರ ವಿರುದ್ಧ ದೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.