ಪುತ್ತೂರು: ಕೊರೊನಾ ನಿಯಂತ್ರಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರಂತೆ ಕೆಲ ನಿರ್ಬಂಧಗಳನ್ನು ವಿಧಿಸಿ ಆದೇಶ ಹೊರಡಿಸಿದೆ ಎಂದು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, 19 ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಕೋವಿಡ್ ನಿಯಮಾವಳಿಯನ್ನು ಮೀರಿ ಪುತ್ತೂರು ನಗರ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಸಂಘಟನೆ ಅಥವಾ ಸಂಘ ಸಂಸ್ಥೆಗಳು ಸಂಘಟನಾ ಕಾರ್ಯಕ್ರಮ ಹಾಗೂ ಪ್ರತಿಭಟನೆ ನಡೆಸದಂತೆ ತಿಳಿಸಲಾಗಿದೆ. ಒಂದು ವೇಳೆ ಕಾರ್ಯಕ್ರಮ ಅಥವಾ ಪ್ರತಿಭಟನೆ ನಡೆಸಿದ್ದು ಕಂಡು ಬಂದ್ರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಡಾ.ಯತೀಶ್ ಉಳ್ಳಾಲ್ ಸೂಚಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಭೀತಿ ಉಂಟಾಗಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಮುನ್ನೆಚ್ಚರಿಕಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿ ಮಾಡಿ, ಕೆಲ ನಿರ್ಧಾರಗಳನ್ನು ಕೈಗೊಂಡಿದ್ದಾರೆ.