ETV Bharat / state

'ಟ್ಯಾಬ್' ಮೂಲಕ ವಿದ್ಯಾರ್ಥಿಗಳ ಮನೆ‌-ಮನೆಗೆ ಶಿಕ್ಷಣ: ಡಾ. ವೀರೇಂದ್ರ ಹೆಗ್ಗಡೆ

author img

By

Published : Nov 9, 2020, 8:29 PM IST

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಕರ್ನಾಟಕ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಅಂತರ್ಜಾಲ ಶಿಕ್ಷಣಕ್ಕೊಂದು ಮಾದರಿಯಾಗಿ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ವಿತರಣೆಯ 'ಜ್ಞಾನತಾಣ' ಕಾರ್ಯಕ್ರಮಕ್ಕೆ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು.

Dharmasthala
ಜ್ಞಾನತಾಣ ಕಾರ್ಯಕ್ರಮ

ಧರ್ಮಸ್ಥಳ: ಕೋವಿಡ್ ಸಂಘರ್ಷದಿಂದ ಮಕ್ಕಳು ತಂತ್ರಜ್ಞಾನದ ಶಿಕ್ಷಣಕ್ಕೆ ಒಗ್ಗಿಕೊಳ್ಳಬೇಕಾದ ಪರಿಸ್ಥಿತಿ ಇಂದಿನದು. ಈ ಸಮಯದಲ್ಲಿ ಅಂತರ್ಜಾಲ ಶಿಕ್ಷಣ ಪಡೆಯುವಲ್ಲಿ ಗ್ರಾಮೀಣ ಮಕ್ಕಳು ವಂಚಿತರಾಗುತ್ತಿದ್ದಾರೆ. ಇದನ್ನರಿತು ಶ್ರೀ ಕ್ಷೇತ್ರದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದಡಿ 10 ಸಾವಿರ ಲ್ಯಾಪ್‌ಟಾಪ್, 20 ಸಾವಿರ ಟ್ಯಾಬ್ ವಿತರಿಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಸೋಮವಾರ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಕರ್ನಾಟಕ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಅಂತರ್ಜಾಲ ಶಿಕ್ಷಣಕ್ಕೊಂದು ಮಾದರಿಯಾಗಿ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ವಿತರಣೆಯ 'ಜ್ಞಾನತಾಣ' ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜ್ಞಾನತಾಣ ಕಾರ್ಯಕ್ರಮಕ್ಕೆ ಚಾಲನೆ

ನಂತರ ಮಾತನಾಡಿದ ಅವರು, ಧರ್ಮಸ್ಥಳ ಕ್ಷೇತ್ರದಿಂದ ಅನೇಕ ರೀತಿಯ ಸೇವಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಧುನಿಕವಾದ ಮತ್ತು ಕಾಲಕ್ಕೆ ಅವಶ್ಯಕವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದೇವೆ. ಕೋವಿಡ್-19ರಿಂದ ಜನ ಭಯ ಪಡುವಂತಹ ಈ ಸಮಯದಲ್ಲಿ ನಮ್ಮ ಶಾಲಾ ಮಕ್ಕಳಿಗೆ ಶಿಕ್ಷಣದ ಅವಶ್ಯಕತೆಗಳನ್ನು ಗಮನಿಸಿ ಶಿಕ್ಷಣ ಅವರಿಗೆ ಹೇಗೆ ತಲುಪಿಸಬಹುದು ಎಂಬ ಚಿಂತನೆಯಲ್ಲಿರುವಾಗ ಅಧುನಿಕವಾದ ಈ ಕಾಲದಲ್ಲಿ ಕ್ಷೇತ್ರದಿಂದ ಸ್ಪಂದಿಸಿ ಮನೆಯಲ್ಲಿಯೇ ಕುಳಿತು ಅಂತರ್ಜಾಲ ಮೂಲಕ ಶಿಕ್ಷಣ ಪಡೆಯುವಂತಹ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಏಕಕಾಲದಲ್ಲಿ ರಾಜ್ಯಾದ್ಯಂತ ಜ್ಞಾನತಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಹಿಂದಿನ ಕಾಲದಲ್ಲಿ ಈಗಿನ ಸಮಕಾಲೀನ ಅನೇಕ ಜನರಿಗೆ ಇದು ದುಬಾರಿ ಶ್ರೀಮಂತ ವಸ್ತು, ಅದರಲ್ಲಿ ಇರುವ ವಿಚಾರಗಳು ಕೆಟ್ಟದ್ದು ಎಂಬ ಭಾವನೆ ಇದೆ. ಅದರೆ ಲ್ಯಾಪ್‌ಟಾಪ್, ಟ್ಯಾಬ್ ಗಳನ್ನು ಬಳಸಿ ಜೀವನವನ್ನು ರೂಪಿಸಿಕೊಳ್ಳಬಹುದು, ವ್ಯಕ್ತಿತ್ವ ರೂಪಿಸಿಕೊಂಡು ಶಿಕ್ಷಣವನ್ನು ಪಡೆಯಬಹುದು. ಹೊಸ ತಂತ್ರಜ್ಞಾನದ ಮೂಲಕ 5ರಿಂದ 10ನೇ ತರಗತಿವರೆಗೆ ಪಾಠಗಳನ್ನು ಸಂಯೋಜಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಸಮಚಿಂತನೆ ಜತೆಗೆ ಹೊಸ ಪ್ರಯೋಗಶೀಲತೆ ಹೆಚ್ಚಾಗಲಿದೆ. ಜೀವನ ಅಮೂಲ್ಯವಾದುದು, ರೋಗಕ್ಕೆ ಹೆದರಿ ಮನೆಯಲ್ಲೇ ಕುಳಿತುಕೊಳ್ಳುವ ಬದಲಾಗಿ ನಮ್ನ ಸೃಜನಶೀಲ ಉಪಕ್ರಮಗಳನ್ನು ಅನುಷ್ಠಾನಕ್ಕೆ ತಂದು ಪ್ರಯೋಗಶೀಲರಾಗಬೇಕು. ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲೆಂದು ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಧ.ಗ್ರಾ.ಯೋಜನೆ ಮುಖ್ಯ ಕಾರ್ಯ‌ನಿರ್ವಾಹಣಾಧಿಕಾರಿ ಅನಿಲ್ ಕುಮಾರ್, ಪ್ರಾದೇಶಿಕ ನಿರ್ದೇಶಕರಾದ ಶಾಂತಾರಾಮ ಪೈ ಇನ್ನಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.