ಮಂಗಳೂರು: ಜಿಲ್ಲೆಯ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಜನನವಾಗುವ ಮಕ್ಕಳ ದಾಖಲೆಯನ್ನು ದಾಖಲಿಸಿ ವರ್ಷದ ಅಂತ್ಯದಲ್ಲಿ ಅಧಿಕಾರಿಗಳು ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದರು.
ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯ್ದೆ 1994ರ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯಿಂದ ಲಿಂಗಾನುಪಾತದ ವರದಿ ಪಡೆದುಕೊಂಡು ಕಡಿಮೆ ಲಿಂಗಾನುಪಾತ ಹೊಂದಿರುವ ಗ್ರಾಮಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ 156 ಸ್ಕ್ಯಾನಿಂಗ್ ಸೆಂಟರ್‌ಗಳಿದ್ದು, ಸೂಕ್ತ ದಾಖಲೆ ಹೊಂದಿರದ ಸ್ಕ್ಯಾನಿಂಗ್ ಸೆಂಟರ್ ಹಾಗೂ ಪರವಾನಗಿ ಇಲ್ಲದಿರುವ ಸೆಂಟರ್‌ಗಳ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.