ETV Bharat / state

ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಫಲಾನುಭವಿಗಳನ್ನು ಗುರುತಿಸಿ: ಸಂಸದ ಕಟೀಲ್ - District level progress review meeting of street vendors' subjective fund scheme

ಬಂದರು ಪ್ರದೇಶಗಳಲ್ಲಿ, ವಾರದ ಸಂತೆ, ಜಾತ್ರೆಗಳಲ್ಲಿ ಅಧಿಕ ಪ್ರಮಾಣದಲ್ಲಿ ಬೀದಿ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಾರೆ. ಅವರನ್ನು ಗುರುತಿಸಿ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಜಿಲ್ಲೆಯ ಎಲ್ಲಾ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹೆಚ್ಚಿನ ಒಲವು ತೋರಿಸಿ ನಿಗದಿತ ಕಾಲಮಿತಿಯೊಳಗೆ ಗುರಿ ಸಾಧಿಸಬೇಕೆಂದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದರು.

district-level-progress-review-meeting-of-street-vendors-subjective-fund-scheme
ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ
author img

By

Published : Nov 18, 2020, 3:43 AM IST

ಮಂಗಳೂರು : ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯನ್ನು ಜನಪ್ರತಿನಿಧಿಗಳ ಸಹಕಾರದೊಂದಿಗೆ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೀದಿಬದಿ ವ್ಯಾಪಾರಿಗಳನ್ನು ಆರ್ಥಿಕವಾಗಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಪಿಎಂ-ಸ್ವನಿಧಿ ಯೋಜನೆಯನ್ನು ರೂಪಿಸಿದ್ದು, ಜಿಲ್ಲೆಯ ಬೀದಿಬದಿ ವ್ಯಾಪಾರಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ರಸ್ತೆಯ ಅಕ್ಕಪಕ್ಕದಲ್ಲಿ ತಾತ್ಕಾಲಿಕ (ಶೆಡ್)ಅಂಗಡಿ ನಿರ್ಮಿಸಿ ವ್ಯಾಪಾರ ನಡೆಸುವ, ಗೂಡಂಗಡಿ, ತಳ್ಳುಗಾಡಿ, ಗೂಡ್ಸ್​ ಗಾಡಿಗಳಲ್ಲಿ ಚಿಕ್ಕ ಪುಟ್ಟ ಕ್ಯಾಂಟೀನ್, ಮನೆಯಲ್ಲಿ ಕ್ಯಾಂಟೀನ್ ನಡೆಸುವ ವ್ಯಾಪಾರಿಗಳು ಕೂಡ ತಮ್ಮ ವ್ಯಾಪಾರವನ್ನು ಮುಂದುವರೆಸಲು ಅವಶ್ಯಕವಿರುವ ತುರ್ತು ಬಂಡವಾಳಕ್ಕೆ ಈ ಯೋಜನೆಯ ಮೂಲಕ ನೆರವು ಪಡೆಯಬಹುದು ಎಂದರು.

ಬಂದರು ಪ್ರದೇಶಗಳಲ್ಲಿ, ವಾರದ ಸಂತೆ, ಜಾತ್ರೆಗಳಲ್ಲಿ ಅಧಿಕ ಪ್ರಮಾಣದಲ್ಲಿ ಬೀದಿ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಾರೆ. ಅವರನ್ನು ಗುರುತಿಸಿ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಜಿಲ್ಲೆಯ ಎಲ್ಲಾ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹೆಚ್ಚಿನ ಒಲವು ತೋರಿಸಿ ನಿಗದಿತ ಕಾಲಮಿತಿಯೊಳಗೆ ಗುರಿ ಸಾಧಿಸಬೇಕೆಂದು ಎಂದು ಸೂಚಿಸಿದರು.

ದಕ್ಞಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಕೊರೊನಾ ಲಾಕ್​ಡೌನ್​ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪಿಎಂ-ಸ್ವನಿಧಿಯ ಮೂಲಕ ವಿಶೇಷ ಕಿರುಸಾಲ ಯೋಜನೆ ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳಿಗೆ ಈ ಯೋಜನೆ ದೊರಕಬೇಕು. ಈ ನಿಟ್ಟಿನಲ್ಲಿ ಸಂತೆ, ಮಾರುಕಟ್ಟೆ, ಬಂದರು ಸೇರಿದಂತೆ ಹೆಚ್ಚಿನ ಪ್ರಮಾಣದಲ್ಲಿ ಬೀದಿಬದಿ ವ್ಯಾಪಾರ ಮಾಡುವ ಪ್ರದೇಶಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ತಂಡದೊಂದಿಗೆ ಲ್ಯಾಪ್‍ ಟಾಪ್ ಮೂಲಕ ಖುದ್ದಾಗಿ ಭೇಟಿ ನೀಡಿ ಅರ್ಜಿಗಳನ್ನು ಪಡೆದು ಆನ್​ಲೈನ್​ನಲ್ಲಿ ಅಪ್​ಲೋಡ್ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯಾತ್ರಿ ನಾಯಕ್, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪ, ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.