ETV Bharat / state

ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಕಾಮಗಾರಿ ಆರಂಭ

author img

By

Published : May 20, 2021, 10:00 AM IST

ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಾಗಾರಿ ಇಂದಿನಿಂದ ಪ್ರಾರಂಭವಾಗಲಿದೆ.

Oxygen production plant work start, District Wenlock Hospital Oxygen production plant work start, District Wenlock Hospital Oxygen, District Wenlock Hospital Oxygen news, ಆಕ್ಸಿಜನ್ ಉತ್ಪಾದನಾ ಘಟಕ ಕಾರ್ಯಾರಂಭ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಕಾರ್ಯಾರಂಭ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸುದ್ದಿ,
ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಇಂದಿನಿಂದ ಕಾರ್ಯಾರಂಭ

ಮಂಗಳೂರು: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿ ಇಂದಿನಿಂದ ಆರಂಭವಾಗಲಿದೆ.

ದ.ಕ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ರೂ. ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ಇಂದಿನಿಂದ ಪ್ರಾರಂಭವಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣದ ಸ್ಥಳ ವೀಕ್ಷಣೆ ನಡೆಸಿ ಮಾತನಾಡಿದ ಶಾಸಕ ಕಾಮತ್, ಪ್ರಾಯೋಗಿಕವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಪಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಅಳವಡಿಸುವ‌ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ಇಂದಿನಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿಗಳು ಪ್ರಾರಂಭವಾಗಲಿದೆ ಎಂದರು.

ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್‌ ಸಂಸ್ಥೆಯ ಸಿಆರ್​ಎಫ್ ನಿಧಿಯಲ್ಲಿ 2 ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಹಾಗಾಗಿ ಇನ್ನು ಕೆಲವೇ ದಿನಗಳಲ್ಲಿ 2 ಆಕ್ಸಿಜನ್ ಪ್ಲಾಂಟ್​ಗಳೂ ಕೂಡ ಜನರ ಸೇವೆಗೆ ಲಭ್ಯವಾಗಲಿವೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದ್ದು, ಸರಿಸುಮಾರು 5 ಕೆಎಲ್ ಆಕ್ಸಿಜನ್ ಬೇಡಿಕೆಯಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಸದ್ಯ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನೀಡುತ್ತಿರುವ ಆಮ್ಲಜನಕ ನಿರ್ಮಾಣ ಘಟಕದಿಂದ ವೆನ್ಲಾಕ್ ಆಸ್ಪತ್ರೆಗೆ ಆಕ್ಸಿಜನ್ ಸಂಪನ್ಮೂಲವನ್ನು ಒದಗಿಸಿದಂತಾಗಿದೆ. ಈ ಪ್ಲಾಂಟ್ ನಿರ್ಮಾಣದಿಂದ ಪ್ರತಿನಿತ್ಯ 1 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದಿಸಬಹುದು. ಇದರಿಂದಾಗಿ ಮೆಡಿಕಲ್ ಆಕ್ಸಿಜನ್ ಸರಬರಾಜುದಾರರ ಮೇಲೆ ಅವಲಂಬಿತವಾಗುವುದನ್ನು ಕಡಿಮೆಗೊಳಿಸಬಹುದಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.