ಮಂಗಳೂರು: ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರ ತಾಯಿ ಕಸ್ತೂರಿ (63) ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೂಡುಬಿದಿರೆ ನಿವಾಸಿಯಾಗಿರುವ ಕಸ್ತೂರಿಯವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿತ್ತು. ತಕ್ಷಣ ಅಲಂಗಾರಿನಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿಯೇ ಮೃತಪಟ್ಟಿದ್ದಾರೆ.
ಮೃತರು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಸಹಿತ ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.