ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯನ್ನು ಕೇಂದ್ರ ಸರ್ಕಾರ ಕೊರೊನಾ ಕ್ಲಸ್ಟರ್ ಹಾಟ್ ಸ್ಪಾಟಾಗಿ ಗುರುತಿಸಿದ ಹಿನ್ನೆಲೆ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲಾಗಿದೆ.
ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದಲೇ ಪೊಲೀಸರು ಫೀಲ್ಡಿಗಿಳಿದಿದ್ದು, ವಾಹನಗಳ ತಪಾಸಣೆಯಲ್ಲಿ ತೊಡಗಿದ್ದಾರೆ. ಅನಗತ್ಯವಾಗಿ ಓಡಾಡುವ ವಾಹನಗಳು ಕಂಡು ಬಂದರೆ ವಶಕ್ಕೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12ರವೆರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 12 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 9 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.