ಮಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿರುವ ಡಿ.ಕೆ.ಶಿವಕುಮಾರ್, ವಿಮಾನ ನಿಲ್ದಾಣದಿಂದ ನೇರವಾಗಿ ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಮನೆಗೆ ಭೇಟಿ ನೀಡಿದರು.
ಮಂಗಳೂರಿನ ಭೇಟಿ ವೇಳೆ ಕಾಂಗ್ರೆಸ್ನ ಹಿರಿಯ ನಾಯಕರಾದ ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಮತ್ತು ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಲು ಮೊದಲೇ ನಿರ್ಧರಿಸಿದ್ದು, ಆಸ್ಕರ್ ಫರ್ನಾಂಡಿಸ್ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಕೆಲ ಹೊತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.
ಆಸ್ಕರ್ ಫರ್ನಾಂಡಿಸ್ ಪತ್ನಿ ಬ್ಲೋಸಂ ಫರ್ನಾಂಡಿಸ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಜೊತೆಗಿದ್ದರು. ಆಸ್ಕರ್ ಫರ್ನಾಂಡಿಸ್ ಭೇಟಿ ವೇಳೆ ಇತರ ನಾಯಕರಿಗೆ ಒಳ ಬರಲು ಅವಕಾಶ ನೀಡಲಾಗಿಲ್ಲ.