ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಸಂದೀಪ್ ಪಾಟೀಲ್ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಡಾ. ಪಿ.ಎಸ್ ಹರ್ಷ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಹರ್ಷ ಅವರು 2017-18ರಲ್ಲಿ ವಾರ್ತಾ ಇಲಾಖೆಯ ಆಯುಕ್ತರಾಗಿದ್ದರು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಎಎಸ್ಪಿ ಆಗಿ ಕೂಡಾ ಕಾರ್ಯನಿರ್ವಹಿಸಿದ್ದರು.
ಮಂಗಳೂರು ಡಿಸಿಪಿಯಾಗಿದ್ದ ಹನುಮಂತರಾಯ್ ಅವರನ್ನು ಕೂಡಾ ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ ಡಾ. ಅನುರಾಗ್ ಗಿರಿ ಅವರನ್ನು ನೇಮಕ ಮಾಡಲಾಗಿದೆ.