ETV Bharat / state

ದಕ್ಷಿಣ ಕನ್ನಡದಲ್ಲಿ ಬಿಜೆಪಿ- ಕಾಂಗ್ರೆಸ್​ನ ಲೆಕ್ಕಾಚಾರ ತಲೆಕೆಳಗು ಮಾಡಿದ ಎಂ ಎನ್ ರಾಜೇಂದ್ರ ಕುಮಾರ್ ಸ್ಪರ್ಧೆ - ಪ್ರತಾಪ್ ಚಂದ್ರ ಶೆಟ್ಟಿ

ಕಾಂಗ್ರೆಸ್​ನಿಂದ ಈ ಬಾರಿ ಪ್ರತಾಪ್ ಚಂದ್ರ ಶೆಟ್ಟಿ ಸ್ಪರ್ಧೆ ಮಾಡದೆ ಇರುವುದರಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈಗಾಗಲೇ 11 ಮಂದಿ ಕಾಂಗ್ರೆಸ್​ನಿಂದ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ಅಭ್ಯರ್ಥಿಗಳ ಘೋಷಣೆಯಾಗಬೇಕಿದೆ. ಇದರ ನಡುವೆ ಎಸ್ ಸಿ ಡಿ ಸಿ ಸಿ ಬ್ಯಾಂಕ್​ನ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್ (Dr. MN Rajendra Kumar) ಅವರ ಸ್ಪರ್ಧೆ ಕಾಂಗ್ರೆಸ್, ಬಿಜೆಪಿಯ ಲೆಕ್ಕಾಚಾರವನ್ನು ತಲೆ ಕೆಳಗು ಮಾಡಿದೆ..

dr-mn-rajendra-kumar-
ಎಂ ಎನ್ ರಾಜೇಂದ್ರ ಕುಮಾರ್
author img

By

Published : Nov 17, 2021, 11:02 PM IST

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಸ್ಥಳೀಯಾಡಳಿತ ಸದಸ್ಯರಿಂದ ಆಯ್ಕೆಯಾಗಲು ನಡೆಯುವ ಎರಡು ವಿಧಾನಪರಿಷತ್ ಚುನಾವಣೆ (Legislative council election) ಹೊಸ ಸಂಚಲನವನ್ನು ಸೃಷ್ಟಿಸಿದೆ.

ಎಂ ಎನ್ ರಾಜೇಂದ್ರ ಕುಮಾರ್ ಮಾತನಾಡಿರುವುದು..

ವಿಧಾನಪರಿಷತ್​ಗೆ ಕಾಂಗ್ರೆಸ್​ನಿಂದ ಆಯ್ಕೆಯಾಗಿದ್ದ ಪ್ರತಾಪ್ ಚಂದ್ರ ಶೆಟ್ಟಿ (prathap chandra shetty) ಮತ್ತು ಬಿಜೆಪಿಯಿಂದ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಖಾಲಿಯಾಗುವ ಎರಡು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಒಂದು ಸ್ಥಾನಕ್ಕೆ ಎರಡು ಪಕ್ಷಗಳು ತಯಾರಿಗಳನ್ನು ಆರಂಭಿಸಿವೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮತ್ತೊಮ್ಮೆ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

ಕಾಂಗ್ರೆಸ್​ನಿಂದ ಈ ಬಾರಿ ಪ್ರತಾಪ್ ಚಂದ್ರ ಶೆಟ್ಟಿ ಸ್ಪರ್ಧೆ ಮಾಡದೆ ಇರುವುದರಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈಗಾಗಲೇ 11 ಮಂದಿ ಕಾಂಗ್ರೆಸ್​ನಿಂದ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ಅಭ್ಯರ್ಥಿಗಳ ಘೋಷಣೆಯಾಗಬೇಕಿದೆ.

ಇದರ ನಡುವೆ ಎಸ್‌ಸಿ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ (SCDCC Bank Chairman Dr. MN Rajendra Kumar) ಅವರ ಸ್ಪರ್ಧೆ ಕಾಂಗ್ರೆಸ್ ಬಿಜೆಪಿಯ ಲೆಕ್ಕಾಚಾರವನ್ನು ತಲೆ ಕೆಳಗು ಮಾಡಿದೆ.

ಸ್ಥಳೀಯಾಡಳಿತ ಬಲಾಬಲ ಪ್ರಕಾರ, ಎರಡು ಸ್ಥಾನದಲ್ಲಿ ಬಿಜೆಪಿಗೆ ಒಂದು ಸ್ಥಾನ ಗೆಲ್ಲುವ ಮತಗಳು ಇದ್ದರೆ, ಕಾಂಗ್ರೆಸ್​ಗೆ ಒಂದು ಸ್ಥಾನ ಗೆಲ್ಲಲು ಕೆಲವು ಮತಗಳ ಕೊರತೆಯಿದೆ. ಸಾಧಾರಣವಾಗಿ ಪಕ್ಷೇತರ ಅಭ್ಯರ್ಥಿಗಳು ದಕ್ಷಿಣ ಕನ್ನಡ ಚುನಾವಣೆಯಲ್ಲಿ ನಿರ್ಣಾಯಕವಾಗದೆ ಇದ್ದರೂ ಪ್ರಭಾವಿಯಾಗಿರುವ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಸ್ಪರ್ಧಿಸುತ್ತಿರುವುದು ಬಿಜೆಪಿ ಕಾಂಗ್ರೆಸ್ ಪಕ್ಷದ ಒಂದು ಸ್ಥಾನ ಗೆಲುವು ಎಂಬ ನಿರೀಕ್ಷೆಗೆ ತಣ್ಣೀರೆರಚಿದೆ.

ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೆ, ಪಕ್ಷೇತರ ಅಭ್ಯರ್ಥಿ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರು ಸ್ಪರ್ಧೆಯ ಘೋಷಣೆ ಮಾಡಿ ಚುನಾವಣಾ ಕಚೇರಿಯನ್ನು ಉದ್ಘಾಟಿಸಿದ್ದಾರೆ. ಚುನಾವಣಾ ಕಚೇರಿ ಉದ್ಘಾಟನೆ ವೇಳೆಯೆ ಅವರು ತಮ್ಮ ಬಲಪ್ರದರ್ಶನವನ್ನು ಮಾಡಿದ್ದಾರೆ. ನವೆಂಬರ್ 22 ರಂದು ನಾಮಪತ್ರ ಸಲ್ಲಿಸುವ ಘೋಷಣೆಯನ್ನು ಮಾಡಿದ್ದಾರೆ.

ಓದಿ: ಹೈಕೋರ್ಟ್ ತಳಮಹಡಿ ಕಚೇರಿ ಸ್ಥಳಾಂತರಕ್ಕೆ KGID ಕಟ್ಟಡ ನೀಡುವಂತೆ ಸರ್ಕಾರಕ್ಕೆ ಮನವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.