ETV Bharat / state

ನೂತನ ಕಡಬ ತಾಲೂಕಿನ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿಗೆ ಶಾಸಕರಿಂದ ಚಾಲನೆ - mini vidhansoudha building construction

ಕಡಬದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ತಹಶೀಲ್ದಾರ್ ಕಚೇರಿ ಬಳಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

Kadaba
ಮಿನಿ ವಿಧಾನ ಸೌಧ ಕಟ್ಟಡ ಕಾಮಗಾರಿಗೆ ಶಾಸಕರಿಂದ ಚಾಲನೆ
author img

By

Published : May 25, 2020, 3:22 PM IST

ಸುಳ್ಯ: ನೂತನ ತಾಲೂಕು ಕೇಂದ್ರ ಕಡಬದಲ್ಲಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಆಗಿ ಒಂದು ವರ್ಷದ ಬಳಿಕ ಇದೀಗ ಗುದ್ದಲಿ ಪೂಜೆಯ ಮೂಲಕ ಕಾಮಗಾರಿಗೆ ಮತ್ತೆ ಜೀವ ಬಂದಂತಾಗಿದೆ.

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಒಂದೇ ಸೂರಿನಡಿಯಲ್ಲಿ ವಿವಿಧ ಇಲಾಖೆಗಳ ಕಚೇರಿಗಳು ತೆರೆಯಬೇಕು ಎನ್ನುವ ಸರ್ಕಾರದ ಆಶಯದಂತೆ ಕಡಬದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಡಬ ತಹಶೀಲ್ದಾರ್ ಕಚೇರಿ ಬಳಿ ಸೋಮವಾರದಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿಗೆ ಶಾಸಕರಿಂದ ಚಾಲನೆ

ಈ ವೇಳೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಹಲವಾರು ಗುದ್ದಲಿ ಪೂಜೆಗಳು ನೆರವೇರಿದ್ದು, ಇದರಲ್ಲಿ ಸೇತುವೆ ಕಾಮಗಾರಿಗಳು ಸೇರಿದಂತೆ ಹಲವು ಕಾಮಗಾರಿಗಳು ಸ್ಥಗಿತವಾದ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಅರಣ್ಯ ಇಲಾಖೆಯ ಕೆಲವು ಅಡೆತಡೆಗಳಿಂದಾಗಿ ಕೆಲವು ಕಾಮಗಾರಿ ಸ್ಥಗಿತಗೊಂಡಿವೆ. ಕೂಡಲೇ ಅವುಗಳನ್ನು ನಿವಾರಿಸಿ ಕಾಮಗಾರಿ ಆರಂಭಿಸಲಾಗುವುದು ಎಂದಿದ್ದಾರೆ.

ಕಡಬ ತಹಶೀಲ್ದಾರ್ ಕಚೇರಿ ಬಳಿ ಸರ್ವೆ ನಂಬರ್​ 130/1ಎಪಿ2ರಲ್ಲಿ 1.60 ಎಕರೆ ಜಮೀನು ಕಾದಿರಿಸಲಾಗಿದ್ದು, ಕಟ್ಟಡ ನಿರ್ಮಾಣದ ಜವಾಬ್ದಾರಿಯನ್ನು ಕರ್ನಾಟಕ ಗೃಹ ಮಂಡಳಿಗೆ ವಹಿಸಲಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ತಾಲೂಕು ಕೇಂದ್ರ ಉದ್ಘಾಟನೆಯಾಗಿದ್ದು, ಈ ವೇಳೆ ಮಿನಿ ವಿಧಾನಸೌಧಕ್ಕೆ ಅಂದಿನ ಕಂದಾಯ ಸಚಿವರಾಗಿದ್ದ ವಿ.ಆರ್.ದೇಶಪಾಂಡೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಇದೀಗ ಮತ್ತೆ ಎರಡನೇ ಬಾರಿ ಕಾಮಗಾರಿಗೆ ಚಾಲನೆ ದೊರೆತಿರುವುದು ಕಡಬದ ಜನತೆಗೆ ಸಂತೋಷ ತಂದಿದೆ. ಈ ವೇಳೆ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದು, ಯಾರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದು ಕಂಡು ಬರಲಿಲ್ಲ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.