ಪುತ್ತೂರ(ದಕ್ಷಿಣ ಕನ್ನಡ): ಪುತ್ತೂರಿನ ಇತಿಹಾಸ ಪ್ರಸಿದ್ಧ ಪರ್ಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರು ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಕೊರೊನಾ ಸಂದರ್ಭದಲ್ಲಿ ಸಂಘ ಸಂಸ್ಥೆಗಳು, ದಾನಿಗಳ ಸಹಕಾರದೊಂದಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಮೂಲಕ ಈ ಶಾಲೆಯನ್ನು ಅಭಿವೃದ್ಧಿಪಡಿಸಲಾಗಿದೆ. ಈ ಮೂಲಕ ನಮ್ಮ ನಿರೀಕ್ಷೆಗೆ ಫಲ ಸಿಕ್ಕಿದೆ ಎಂದು ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.
ಈಗಾಗಲೇ ಶಾಲೆಯಲ್ಲಿ ಎರಡು ಎಕರೆಯಷ್ಟು ಶಾಲಾ ಆಟದ ಮೈದಾನವಿದ್ದು, ಮುಂದಿನ ದಿನಗಳಲ್ಲಿ ಮೈದಾನಕ್ಕೆ ಚರಂಡಿ ಹಾಗೂ ತಡೆಗೋಡೆ ನಿರ್ಮಿಸಲು ಅನುದಾನ ನೀಡುವ ಭರವಸೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಸಂಪೂರ್ಣ ಶಿಕ್ಷಣ ಸಿಗಬೇಕಾದರೆ ಮಕ್ಕಳಲ್ಲಿಯ ಪ್ರತಿಭೆಗಳನ್ನು ಹೊರತರಬೇಕಾಗಿದೆ, ಅದಕ್ಕೆ ಇಂತಹ ವೇದಿಕೆ ಪೂರಕವಾಗಿದೆ, ಶುದ್ಧ ಮನಸ್ಸು, ಗಾಳಿ, ನೀರು ಎಲ್ಲಾ ಮನುಷ್ಯನ ಬೆಳವಣಿಗೆಗೆ ಅಗತ್ಯ. ಈ ನಿಟ್ಟಿನಲ್ಲಿ ಶಾಲೆಯಲ್ಲಿ ಶುದ್ಧ ನೀರಿನ ಘಟಕವನ್ನು ಉದ್ಘಾಟಿಸುವ ಭಾಗ್ಯ ಸಿಕ್ಕಿದೆ ಎಂದು ಹೇಳಿದರು.
ಸಭೆಯ ಮೊದಲು ವಿಶೇಷವಾಗಿ ಶಾಲೆಯ ವಿದ್ಯಾರ್ಥಿಗಳ ಪೋಷಕರಿಂದ ಮಳೆಯಾಳಿ ನೃತ್ಯ ಪ್ರದರ್ಶನಗೊಂಡಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಎನ್. ಭಟ್, ಸಂಪನ್ಮೂಲ ವ್ಯಕ್ತಿ ಶಶಿಕಲಾ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಸುಚಿತ್ರಾ ಕುಮಾರಿ ಮತ್ತು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ರೈ ಒಳತ್ತಡ್ಕ, ಮುಖ್ಯ ಶಿಕ್ಷಕಿ ವತ್ಸಲಾ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಜಂಟಿ ಕಾರ್ಯದರ್ಶಿ ವಿಕ್ರಂ ಪರ್ಲಡ್ಕ, ಡಾ. ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಬಿಜ್ಜವಾರ ಗ್ರಾಮದ ಸರ್ಕಾರಿ ಶಾಲೆ ಜಮೀನು ಒತ್ತುವರಿ ತೆರವು