ETV Bharat / state

ಫಸ್ಟ್ ನ್ಯೂರೋ ಆಸ್ಪತ್ರೆಯ ಕೊರೊನಾ ಸೋಂಕು ಮೂಲ ಪತ್ತೆ ಹಚ್ಚಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

author img

By

Published : May 6, 2020, 11:04 PM IST

ಸೋಂಕಿನ ಮೂಲ ತನಿಖೆಗೆ ಉನ್ನತ ವೈದ್ಯಕೀಯ ತಂಡದ ನೆರವಿನೊಂದಿಗೆ ಸಮಗ್ರ ವರದಿಯನ್ನು ತಯಾರಿಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

Minister Kota Srinivasa Poojary
ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಡಿಸಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿದ ಅವರು, ಸೋಂಕಿನ ಮೂಲ ತನಿಖೆಗೆ ಉನ್ನತ ವೈದ್ಯಕೀಯ ತಂಡದ ನೆರವಿನೊಂದಿಗೆ ಸಮಗ್ರ ವರದಿಯನ್ನು ತಯಾರಿಸಿ ಸರಕಾರಕ್ಕೆ ವರದಿ ಸಲ್ಲಿಸಿ. ಇದರಿಂದ ಸೋಂಕಿನ ಬಗ್ಗೆ ಸಾರ್ವಜನಿಕರಿಗಿರುವ ಸಂಶಯ ನಿವಾರಣೆಯಾಗಲು ಸಾಧ್ಯ ಎಂದರು. ಜಿಲ್ಲೆಯಲ್ಲಿ ಇದುವರೆಗೆ ಸುಮಾರು 11 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರನ್ನು 433 ಬಸ್​​ಗಳಲ್ಲಿ ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದೆ. ಉಚಿತವಾಗಿ ಹೊರ ಜಿಲ್ಲೆಗೆ ಪ್ರಯಾಣಿಸಲು ಗುರುವಾರ ಕೊನೆಯ ದಿನವಾಗಿದ್ದು, ಹೋಗಲು ಉದ್ದೇಶಿಸಿರುವ ಎಲ್ಲಾ ವಲಸೆ ಕಾರ್ಮಿಕರಿಗೂ ಮಂಗಳೂರು ಲಾಲ್​ಬಾಗ್ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಬೇಕು. ಆದರೆ ಮಾಲ್​ಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಇನ್ನು ಜಿಲ್ಲೆಯಲ್ಲಿ ವಿವಾಹ ಕಾರ್ಯಕ್ರಮ ನಡೆಸುವವರಿಗಾಗಿ ಅಂತರ್​ ಜಿಲ್ಲೆಗೆ ಪ್ರಯಾಣಿಸುವ ಟೂ ವೇ ಪಾಸ್ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ವಿವಾಹ ಕಾರ್ಯಕ್ರಮಕ್ಕೆ ಗರಿಷ್ಠ 25 ಜನರಿಗೆ ಸೀಮಿತಗೊಳಿಸಿ ನಡೆಸಬೇಕೆಂದು ಸೂಚನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.