ETV Bharat / state

ದಕ್ಷಿಣ ಕನ್ನಡ - ಕೊಡಗು ಜಿಲ್ಲೆ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಬೆಚ್ಚಿಬಿದ್ದ ಜನ

ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಭಾರಿ ಶಬ್ದದಿಂದ ಕೆಲವರು ಹೆದರಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.

earthquake-in-border-parts-of-dakshina-kannada-and-kodagu-district
ದಕ್ಷಿಣ ಕನ್ನಡ-ಕೊಡಗು ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಬೆಚ್ಚಿಬಿದ್ದ ಜನ
author img

By

Published : Jul 1, 2022, 7:24 AM IST

ಸುಳ್ಯ(ದಕ್ಷಿಣಕನ್ನಡ): ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಕಡೆ ಮತ್ತೊಮ್ಮೆ ಗುರುವಾರ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಏಕಾಏಕಿ ಉಂಟಾದ ಶಬ್ದ ಗಾಢ ನಿದ್ರೆಯಲ್ಲಿದ್ದ ಜನರನ್ನು ಬಡಿದೆಬ್ಬಿಸಿದೆ. ಮೊದಲಿಗೆ ಭಾರಿ ಶಬ್ದ ಕೇಳಿ ಬಂದಿದ್ದು, ನಂತರ ಒಮ್ಮೆಲೆ ಸುಮಾರು 2 ಸೆಕೆಂಡ್​ಗಳ ಕಾಲ ಭೂಮಿ ನಡುಗಿದ ಅನುಭವ ಆಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ.

ಶಬ್ದದಿಂದ ಕೆಲವರು ಹೆದರಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಕಳೆದ ಒಂದು ವಾರದಲ್ಲಿ ಕೊಡಗು ಹಾಗೂ ಸುಳ್ಯ ತಾಲೂಕಿನ ವಿವಿಧ ಕಡೆ ನಾಲ್ಕನೇ ಬಾರಿಗೆ ಭೂಮಿ ಕಂಪಿಸಿದ ಅನುಭವವಾಗುತ್ತಿದೆ. ಜನರು ಆತಂಕ ಮುಂದುವರೆದಿದೆ.

ಇದನ್ನೂ ಓದಿ: ಇಂದಿನಿಂದ ಮಹಾನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ; ನಿಯಮ ಮೀರಿದರೆ ದಂಡವೆಷ್ಟು ಗೊತ್ತಾ?!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.