ETV Bharat / state

ಪಠ್ಯ ಪುಸ್ತಕದಲ್ಲಿ ಜೈನ ಧರ್ಮದ ಬಗ್ಗೆ ತಪ್ಪು ಮಾಹಿತಿ: ಮರು ಮುದ್ರಣ ಆಗ್ರಹಕ್ಕೆ ಸಚಿವರಿಂದ ಸ್ಪಂದನೆ

ದ್ವಿತೀಯ ಪಿಯುಸಿ ಪಠ್ಯದಲ್ಲಿ ಆಗಿರುವ ಎಡವಟ್ಟಿನ ಬಗ್ಗೆ ಸ್ವಾಮೀಜಿಯವರು ಶಿಕ್ಷಣ ಸಚಿವರಿಗೆ ತಿಳಿಸಿ ಪರಿಶೀಲನೆ ನಡೆಸುವಂತೆ ಪತ್ರ ಮೂಲಕ ಮನವಿ ಮಾಡಿದ್ದರು. ಇದಕ್ಕೆ ಸಚಿವರು ಸ್ಪಂದಿಸಿ ಸರಿಪಡಿಸುವುದಾಗಿ ತಿಳಿಸಿದ್ದಾರೆ.

ಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ
ಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ
author img

By

Published : Sep 9, 2020, 11:05 PM IST

ಮಂಗಳೂರು: ದ್ವಿತೀಯ ಪಿಯುಸಿ ಪಠ್ಯದಲ್ಲಿ ಆಗಿರುವ ಎಡವಟ್ಟಿನ ಬಗ್ಗೆ ಮೂಡುಬಿದಿರೆ ಶ್ರೀಜೈನ ಮಠದ ಸ್ವಾಮೀಜಿ ಶಿಕ್ಷಣ ಸಚಿವರಿಗೆ ಪರಿಶೀಲಿಸಲು ತಿಳಿಸಿದ್ದರು. ಇದಕ್ಕೆ ಸಚಿವರು ಪಠ್ಯ ಪುಸ್ತಕವನ್ನು ಮರು ಮುದ್ರಣ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದ್ದಾರೆ.

ದ್ವಿತೀಯ ಪಿಯುಸಿ ಪಠ್ಯದಲ್ಲಿ ಆಗಿರುವ ಎಡವಟ್ಟಿನ ಬಗ್ಗೆ ಸ್ವಾಮೀಜಿಯವರು ಶಿಕ್ಷಣ ಸಚಿವರಿಗೆ ತಿಳಿಸಿ ಪರಿಶೀಲನೆ ನಡೆಸುವಂತೆ ಪತ್ರ ಮೂಲಕ ಮನವಿ ಮಾಡಿದ್ದರು.

ಇದಕ್ಕೆ ಸೂಕ್ತವಾಗಿ ಸ್ಪಂದಿಸಿರುವ ಸಚಿವ ಸುರೇಶ್ ಕುಮಾರ್ ಅವರು, ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕದಲ್ಲಿ ಜೈನ‌ಧರ್ಮ ಹಾಗೂ ಭಗವಾನ್ ಶ್ರೀ ಮಹಾವೀರ ಸ್ವಾಮಿಗಳ ಬಗ್ಗೆ ಮುದ್ರಣವಾಗಿರುವ ತಪ್ಪು ಮಾಹಿತಿಗಳನ್ನು ಪರಿಶೀಲಿಸಿ ಸೂಕ್ತ ತಿದ್ದುಪಡಿಯೊಂದಿಗೆ ಪರಿಷ್ಕೃತ ಪಠ್ಯ ಪುಸ್ತಕದ ಮರು ಮುದ್ರಣಕ್ಕೆ ಒಪ್ಪಿಗೆ ಸೂಚಿಸಿರುವುದಾಗಿ ದೂರವಾಣಿ ಮೂಲಕ ಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಗೆ ಸಚಿವರು ತಿಳಿಸಿದ್ದಾರೆ.

ಈ ಬಗ್ಗೆ ತಕ್ಷಣ ಸ್ಪಂದಿಸಿರುವ ಸರ್ಕಾರ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ, ಶ್ರೀಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್ ಹಾಗೂ ಮಾಧ್ಯಮದವರಿಗೆ ಸ್ವಾಮೀಜಿ ಕೃತಜ್ಞತೆ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.