ETV Bharat / state

ಧರ್ಮಸ್ಥಳ ಭೇಟಿ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದು ಹೀಗೆ.. - Education Minister Suresh Kumar, Dr D Virendra Hegde

ಸಾಮಾಜಿಕ ಜಾಲತಾಣದಲ್ಲಿ ವಿಸ್ತೃತವಾಗಿ ಬರೆದುಕೊಂಡಿರುವ ಸುರೇಶ್​ ಕುಮಾರ್​​, ತಮ್ಮ ಹುಟ್ಟು ಹಬ್ಬದ ಹಿನ್ನೆಲೆ ‌ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು, ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜತೆ‌ ಚರ್ಚೆ ನಡೆಸಲಾಯಿತು ಎಂದಿದ್ದಾರೆ.

visit-to-dharmasthala
ಧರ್ಮಸ್ಥಳದ ಭೇಟಿ
author img

By

Published : Nov 11, 2020, 6:32 PM IST

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಜಾರಿಗೊಳಿಸಲಾದ 'ಜ್ಞಾನ ತಾಣ' ಕುರಿತು ಸಚಿವ ಸುರೇಶ್ ಕುಮಾರ್ ಹಾಗೂ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಚರ್ಚೆ, ಸಮಾಲೋಚನೆ ‌ನಡೆಸಿದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಸ್ತೃತವಾಗಿ ಬರೆದುಕೊಂಡಿರುವ ಸುರೇಶ್​ ಕುಮಾರ್​​, ತಮ್ಮ ಹುಟ್ಟು ಹಬ್ಬದ ಹಿನ್ನೆಲೆ ‌ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು, ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜತೆ‌ ಚರ್ಚೆ ನಡೆಸಲಾಯಿತು. ಧರ್ಮಸ್ಥಳ ಕ್ಷೇತ್ರದಿಂದ ಸುಮಾರು ₹ 21 ಕೋಟಿ ರೂ. ವೆಚ್ಚದಲ್ಲಿ ಲ್ಯಾಪ್-ಟ್ಯಾಪ್ ಮತ್ತು ಟ್ಯಾಬ್​ಗಳನ್ನು ‌ವಿತರಣೆ ಮಾಡಲಾಗುತ್ತಿರುವುದು ಶ್ಲಾಘನೀಯ ಎಂದಿದ್ದಾರೆ.

ಶಾಲೆಗಳನ್ನು ತೆರೆಯಬೇಕೋ ಅಥವಾ ಬೇಡವೋ ಎಂಬುದರ ಕುರಿತು ಸಮಾಜದಲ್ಲಿ ಚರ್ಚೆ ನಡೆಯುತ್ತಿದೆ. ಆನ್​ಲೈನ್ ಶಿಕ್ಷಣದಲ್ಲೂ ಹಲವಾರು ಇತಿಮಿತಿಗಳಿವೆ. ಎಸ್.ಎಸ್.ಎಲ್.ಸಿ ಪರೀಕ್ಷೆ ಸುಸೂತ್ರವಾಗಿ ನಡೆದ ಹಿನ್ನೆಲೆ ‌ಹಾಗೂ‌ ಈ ಬಾರಿ ವಿಶೇಷ ಸನ್ನಿವೇಶದಲ್ಲಿ ಜರುಗಿದ್ದ ಎಸ್ಎಸ್ಎಲ್​ಸಿ ಪರೀಕ್ಷೆಗಳು ನಡೆಯುವುದಕ್ಕಿಂತ ಮುನ್ನ ಧರ್ಮಸ್ಥಳಕ್ಕೆ ಆಗಮಿಸಿ ಭಗವಂತನ ಕೃಪೆ, ಆಶೀರ್ವಾದ ಪಡೆದಿದ್ದೆ. ಪರೀಕ್ಷೆ ಮುಗಿದ ತಕ್ಷಣ ಬಂದು ನನ್ನ ಧನ್ಯವಾದಗಳನ್ನು ಸಮರ್ಪಿಸಿದ್ದೆ ಎಂದು ಧರ್ಮಸ್ಥಳ ಭೇಟಿ ‌ಕುರಿತು‌ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.