ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅಧ್ಯಕ್ಷರ ಆಯ್ಕೆ - ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೇಶವ ಪ್ರಸಾದ್ ಮುಳಿಯ ಆಯ್ಕೆ ಆಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೇಶವ ಪ್ರಸಾದ್ ಮುಳಿಯ ಆಯ್ಕೆ ಆಗಿದ್ದಾರೆ.
ಇಂದು ಬೆಳಗ್ಗೆ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆದ ದೇವಳದ ವ್ಯವಸ್ಥಾಪನಾ ಸಮಿತಿ ಪ್ರಥಮ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಜರುಗಿದ್ದು, ದೇವಳದ ಆಡಳಿತಾಧಿಕಾರಿ ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ವೇಳೆ ದೇವಳದ ಕಾರ್ಯ ನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ನೂತನ ಸಮಿತಿ ಸದಸ್ಯರು,ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೇಕೋಡಿ ಸೂರ್ಯನಾರಾಯಣ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನ್ಯಾಯವಾದಿ ಇ.ಶಿವಪ್ರಸಾದ್, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್,ಉಪಾಧ್ಯಕ್ಷೆ ವಿದ್ಯಾ ಗೌರಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ರವೀಂದ್ರ ಪಿ , ಜಿ.ಪಂ ಸದಸ್ಯೆ ಶಯನಾ ಜಯಾನಂದ ಮತ್ತಿತರರು ಉಪಸ್ಥಿತರಿದ್ದರು.