ಪುತ್ತೂರು (ದಕ್ಷಿಣ ಕನ್ನಡ): ರಾಜ್ಯದಲ್ಲಿ ಪ್ರಥಮ ಬಾರಿಗೆ ಸ್ಥಾಪನೆಗೊಂಡಿರುವ ದ.ಕ.ಜಿಲ್ಲೆಗೆ ಒಳಪಟ್ಟ ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಪುತ್ತೂರಿನಲ್ಲಿ ಭಾನುವಾರ ನಡೆಯಿತು.
ಪುತ್ತೂರು ಮೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎಂ.ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಯಾವುದೇ ಸವಲತ್ತುಗಳನ್ನು ಹೋರಾಟದ ಮೂಲಕ ಪಡೆದುಕೊಳ್ಳುವಲ್ಲಿ ಸಂಘಟನೆಯ ಪಾತ್ರ ಬಹಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕರು ತಮ್ಮ ಆಶೋತ್ತರಗಳನ್ನು ನೆರವೇರಿಸಿಕೊಳ್ಳುವಲ್ಲಿ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘವನ್ನು ರಚಿಸಲಾಗಿದೆ. ಈ ಮೂಲಕ ಒಳ್ಳೆಯ ಆಶೋತ್ತರಗಳನ್ನು ಇಟ್ಟುಕೊಂಡು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಸಂಘ ನಿರಂತರ ಕೆಲಸ ಮಾಡಲಿ ಎಂದರು.
ಲೈನ್‍ಮ್ಯಾನ್‍ಗಳ ನೇಮಕ ಆಧಾರದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವುದು ಇಲಾಖೆಯ ಮೂಲಕ ಕಷ್ಟಸಾಧ್ಯ. ಸರ್ಕಾರದ ಮಟ್ಟದಲ್ಲಿ ಮಾನದಂಡ ಇಟ್ಟುಕೊಂಡು ಪ್ರಯತ್ನಿಸಬೇಕಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಮಿಕ ಸಂಘಗಳ ಒಕ್ಕೂಟದ ತಾಲೂಕು ಗೌರವಾಧ್ಯಕ್ಷ ಹಾಗೂ ವಿದ್ಯುತ್ ಕಂಬ ಅಳವಡಿಸುವ ಸಂಘದ ಗೌರವಾಧ್ಯಕ್ಷ ಬಿ.ಪುರಂದರ ಭಟ್, ಮುಖ್ಯ ಅತಿಥಿಯಾಗಿ ಸಂಘದ ಗೌರವ ಸಲಹೆಗಾರ ಎಂ.ಶೇಷಪ್ಪ ಕುಲಾಲ್, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ತಾಲೂಕು ಸಂಘದ ಅಧ್ಯಕ್ಷ ಹರಿಪ್ರಸಾದ್ ಪಿ.ಕೆ., ಸಂಘದ ಕೋಶಾಧಿಕಾರಿ ಮೋನಪ್ಪ ಕೆ., ಪ್ರಧಾನ ಕಾರ್ಯದರ್ಶಿ ಸುಂದರ ಸೇಡಿಯಾಪು, ಸಂಘದ ಜಿಲ್ಲಾಧ್ಯಕ್ಷ ಕೆ.ಜಯರಾಮ ಕುಲಾಲ್ ಉಪಸ್ಥಿತರಿದ್ದರು.
ಇದನ್ನೂ ಓದಿ: ಎಸಿಬಿಯಿಂದ ಲೋಕಾಯುಕ್ತಕ್ಕೆ ಡಿವೈಎಸ್ಪಿ, ಇನ್ಸ್ಪೆಕ್ಟರ್ಗಳ ವರ್ಗಾವಣೆ