ಕಡಬ: ವಿದ್ಯುತ್ ಶಾಕ್ ತಗುಲಿ ಆನೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.