ETV Bharat / state

ಶಿರಸಿಯಲ್ಲಿ ರಾಜ್ಯದ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಬಸವರಾಜ ಬೊಮ್ಮಾಯಿ

author img

By

Published : Jan 15, 2023, 1:06 PM IST

ಪರಿಸರ, ತೋಟಗಾರಿಕೆ, ಕೃಷಿ, ಜೀವ ವೈವಿಧ್ಯ, ವನ್ಯಜೀವಿ ರಕ್ಷಣೆ, ಜನಾಭಿವೃದ್ಧಿ ಹಾಗೂ ಮತ್ತು ಆರ್ಥಿಕತೆಯ ಕುರಿತಾದ ಸಮಗ್ರ ಅಧ್ಯಯನಕ್ಕೆ ಪರಿಸರ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ಶಿರಸಿಯಲ್ಲಿ ಸ್ಥಾಪನೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Basavaraj Bommai
ಬಸವರಾಜ ಬೊಮ್ಮಾಯಿ
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿರಸಿ: ಪರಿಸರ ಹಾಗೂ ತೋಟಗಾರಿಕಾ ಕಾಲೇಜುಗಳು ಜಿಲ್ಲೆಯಲ್ಲಿರುವ ಕಾರಣ ಎರಡನ್ನೂ ಸಂಯೋಜಿಸಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪರಿಸರ, ತೋಟಗಾರಿಕೆ, ಕೃಷಿ, ಜೀವ ವೈವಿಧ್ಯ, ವನ್ಯಜೀವಿ ರಕ್ಷಣೆ, ಜನಾಭಿವೃದ್ಧಿ ಹಾಗೂ ಮತ್ತು ಆರ್ಥಿಕತೆಯ ಕುರಿತಾದ ಸಮಗ್ರ ಅಧ್ಯಯನಕ್ಕೆ ಜೀವ ಪರಿಸರ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ಶಿರಸಿಯಲ್ಲಿ ಸ್ಥಾಪನೆ ಮಾಡಲಿದ್ದೇವೆ. ಈ ವಿಶ್ವವಿದ್ಯಾಲಯದ ಜತೆಗೆ ಸಾಂಪ್ರದಾಯಿಕ ಶಿಕ್ಷಣವಾದ ಕಲೆ, ವಾಣಿಜ್ಯ, ವಿಜ್ಞಾನ ಪದವಿ ಕೂಡ ಇರಲಿದೆ. ಈ ಕಾಂಪೋಸಿಟ್ ವಿಶ್ವವಿದ್ಯಾಲಯ ಸ್ಥಾಪನೆಗೆ ಈ ಬಾರಿಯ ಬಜೆಟ್​ನಲ್ಲಿ ಅನುದಾನ ನೀಡಲಾಗುವುದು ಎಂದು ಹೇಳಿದರು.

ಅರಣ್ಯವಾಸಿಗಳಿಗೆ ಅಭಯ: ಇಡೀ ದೇಶದ ಎಲ್ಲಾ ರಾಜ್ಯಗಳು ಅರಣ್ಯ ಹಕ್ಕಿನ ಸಮಸ್ಯೆ ಎದುರಿಸುತ್ತಿವೆ. ಈ ಕುರಿತ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್​ನಲ್ಲಿದೆ. ಕೇಂದ್ರ ಸರ್ಕಾರ ಕೂಡ ಈ ವಿಚಾರದ ಬಗ್ಗೆ ನಮ್ಮನ್ನು ಕೇಳಿದ್ದು, ಮೂರು ತಲೆಮಾರಿನ ಬದಲು ಒಂದು ತಲೆಮಾರಿನ ಆಧಾರ ಪರಿಗಣಿಸಿ ಅವರನ್ನು ಅರಣ್ಯವಾಸಿಗಳೆಂದು ಹಕ್ಕು ಪತ್ರ ವಿತರಿಸಬೇಕು ಅಂತಾ ರಾಜ್ಯದ ಸ್ಪಷ್ಟ ಅಭಿಪ್ರಾಯವನ್ನು ಕೇಂದ್ರಕ್ಕೆ ಕಳುಹಿಸಿದ್ದೇವೆ. ಅದು ಕೇಂದ್ರದಿಂದ ಸುಪ್ರೀಂ ಕೋರ್ಟ್​ಗೆ ಮಂಡನೆಯಾಗಲಿದೆ. ರಾಜ್ಯದಲ್ಲಿ ಎಲ್ಲೆಲ್ಲಿ ಅರಣ್ಯವಾಸಿಗಳಿದ್ದಾರೋ ಅವರನ್ನು ಯಾವ ಕಾರಣಕ್ಕೂ ನಮ್ಮ ರಾಜ್ಯ ಸರ್ಕಾರ ಒಕ್ಕಲೆಬ್ಬಿಸಲ್ಲ. ಈಗಾಗಲೇ ಅಧಿಕಾರಿಗಳ ಸಭೆಯನ್ನೂ ನಡೆಸಿದ್ದು, ಸುಪ್ರೀಂ ತೀರ್ಪಿನವರೆಗೂ ಅಧಿಕಾರಿಗಳು ಕೂಡ ಅರಣ್ಯವಾಸಿಗಳಿಗೆ ತೊಂದರೆ ನೀಡದಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಕಳಸ ಬಂಡೂರಿ ಕಾಮಗಾರಿ ನಡೆಸುತ್ತೇವೆ: ಕಳಸಾ- ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಗೋವಾದವರು ಎಲ್ಲಿಗೆ ಬೇಕಾದರೂ ಹೋಗಲಿ. ನಾವು ಸುಪ್ರೀಂ ಕೋರ್ಟ್ ನಿರ್ದೇಶಿತ ಪೀಠದ ವರದಿಯಂತೆ ಕಾಮಗಾರಿಗಳನ್ನ ನಡೆಸುತ್ತೇವೆ. ಗೋವಾದವರು ಈಗಾಗಲೇ ಸುಪ್ರೀಂ ಕೋರ್ಟಗೆ ಹೋಗಿ ವಾಪಸ್​ ಬಂದಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶಿತ ಪೀಠ ರಚನೆಯಾಗಿ, ಅದರ ವರದಿಯ ಆಧಾರದಲ್ಲಿ ನೋಟಿಫಿಕೇಶನ್ ಮಾಡಲಾಗಿದೆ. ಡಿಪಿಆರ್ ಒಪ್ಪಿಗೆ ನೀಡಿದೆ. ಹೀಗಾಗಿ, ಸುಪ್ರೀಂ ಕೋರ್ಟ್​ನ ಆದೇಶ ಹಾಗೂ ಪೀಠದ ವರದಿಯಂತೆ ಕಾಮಗಾರಿಗಳನ್ನು ನಡೆಸಲಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: 'ಮೀಸಲಾತಿಯಲ್ಲಿ ಗೊಂದಲವಿಲ್ಲ': ಮಹದಾಯಿ ಕಾಮಗಾರಿ ಆರಂಭದ ಬಗ್ಗೆ ಬೊಮ್ಮಾಯಿ ಭರವಸೆ

ಶಿರಸಿ ಜಿಲ್ಲೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಶಿರಸಿ ಜಿಲ್ಲೆ ಬೇಡಿಕೆಯ ಬಗ್ಗೆ ಹೋರಾಟ ಸಮಿತಿಯವರು ಮನವಿ ಸಲ್ಲಿಸಿದ್ದಾರೆ. ಈ ರೀತಿಯ ಬೇಡಿಕೆ ರಾಜ್ಯದ ಹಲವೆಡೆ ಇದೆ. ಹೀಗಾಗಿ, ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳುತ್ತೇವೆ. ಈಗಾಗಲೇ ರಾಮಕೃಷ್ಣ ಹೆಗಡೆಯವರ ಹೆಸರಿನಲ್ಲಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ ಪೀಠ ಮಾಡಲಾಗಿದೆ. ಹೆಗಡೆಯವರು ಕೇವಲ ಒಂದು ವಿಚಾರದಲ್ಲಿ ಅಲ್ಲ, ಹಲವು ಕ್ಷೇತ್ರಗಳಲ್ಲಿ ಪರಿಣಿತರು. ಹೀಗಾಗಿ, ಸಮಗ್ರ ಅಧ್ಯಯನಕ್ಕಾಗಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅವರಿಗೆ ಒಂದು ಪೀಠ ಮಾಡಲಾಗುವುದು ಎಂದರು.

ಕುಮಟಾದಲ್ಲೇ ಆಸ್ಪತ್ರೆಗೆ ಅಡಿಗಲ್ಲು: ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಈಗಾಗಲೇ ಇದೆ. ಘಟ್ಟದ ಭಾಗದ ಜನರಿಗೆ ಅನುಕೂಲವಾಗುವಂತೆ ಸಾರಿಗೆ ಸಂಪರ್ಕ ನೋಡಿಕೊಂಡು ಜನಾಭಿಪ್ರಾಯದಂತೆ ಕುಮಟಾದಲ್ಲಿ ಆಸ್ಪತ್ರೆ ಮಾಡಲು ತೀರ್ಮಾನಿಸಲಾಗಿದ್ದು, ಆದಷ್ಟು ಬೇಗ ಆದೇಶಿಸಿ ನಾನೇ ಅದಕ್ಕೆ ಅಡಿಗಲ್ಲು ಹಾಕುತ್ತೇನೆ ಎಂದು ಭರವಸೆ ಕೊಟ್ಟರು.

ಸಚಿವ ಸಂಪುಟ ವಿಸ್ತರಣೆ: ಹೈಕಮಾಂಡ್ ಸೂಚನೆ ನೀಡುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಕೆಲವು ನಿಗಮಗಳ ಅವಧಿ ಮುಗಿದಿವೆ, ಕೆಲವರದ್ದು ಆಗಿಲ್ಲ. ಇವೆಲ್ಲವನ್ನೂ ಪರಿಶೀಲಿಸಿ ಅಧ್ಯಕ್ಷರು, ಸದಸ್ಯರ ನೇಮಕ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮೋದಿ ಅವರು ತೀರ್ಮಾನ ಮಾಡುತ್ತಾರೆ: ಪ್ರಹ್ಲಾದ್ ಜೋಶಿ..

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಮ ಹೆಬ್ಬಾರ, ಕೋಟ ಶ್ರೀನಿವಾಸ ಪೂಜಾರಿ, ಸಿ.ಸಿ.ಪಾಟೀಲ್, ಶಾಸಕರಾದ ಸುನೀಲ ನಾಯ್ಕ, ಶಾಂತಾರಾಮ ಸಿದ್ಧಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.