ETV Bharat / state

ರಾಜೀವ್ ಗಾಂಧಿ ವಿವಿ ವಲಯ ಕಚೇರಿ ಮಂಗಳೂರಿನಲ್ಲಿ ಸ್ಥಾಪನೆ: ಸಚಿವ ಯು.ಟಿ ಖಾದರ್‌ - U.T.Khadar

ವಲಯ ಕಚೇರಿಯ ಜೊತೆಗೆ ಸ್ಪೋರ್ಟ್ಸ್ ಕಾಂಪ್ಲೆಕ್ಸ್​ ನಿರ್ಮಿಸುವ ಉದ್ದೇಶ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ 5 ಎಕರೆ ಜಾಗ ನೀಡುವಂತೆ ಕೇಳಿಕೊಳ್ಳಲಾಗಿದೆ. ಸ್ಥಳ ಲಭ್ಯವಾದಲ್ಲಿ ತಕ್ಷಣ ಕಾಮಗಾರಿ ಆರಂಭಿಸಲಾಗುವುದು. ಈ ಬಗ್ಗೆ ಸಿಂಡಿಕೇಟ್​ ಸಭೆ ಆಯೋಜಿಸಿ ಚರ್ಚಿಸಲಾಗುವುದು ಎಂದು ಸಚಿವ ಯು.ಟಿ ಖಾದರ್ ಹೇಳಿದರು.

ಯು.ಟಿ.ಖಾದರ್
author img

By

Published : Jun 15, 2019, 11:44 PM IST

ಮಂಗಳೂರು: ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಅಧೀನದಲ್ಲಿ ರಾಜ್ಯದ ಎಲ್ಲಾ ಮೆಡಿಕಲ್ ಸೈನ್ಸ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜುಗಳು ನಡೆಯುತ್ತಿದ್ದು, ಅದರ ವಲಯ ಕಚೇರಿಯನ್ನು ಮಂಗಳೂರಿನಲ್ಲಿ ಶೀಘ್ರದಲ್ಲೇ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿ ಪ್ರತಿಯೊಂದಕ್ಕೂ ಬೆಂಗಳೂರಿನ ಕೇಂದ್ರ ಕಚೇರಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆ ಸಮಸ್ಯೆ ನೀಗಿಸಲೆಂದೇ ವಲಯ ಕಚೇರಿ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು‌.

ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ:

ಭವಿಷ್ಯದಲ್ಲಿ ಪರಿಸರ ಸ್ನೇಹಿ ವಾಹನಗಳು ಬರುತ್ತಿರುವ ಸೂಚನೆ ಸ್ಪಷ್ಟವಾಗಿದ್ದು, ಈ ಸಂಬಂಧ ವಿದ್ಯುತ್​ ಚಾಲಿತ ಕಾರು, ಆಟೋ, ಬೈಕ್​​ಗಳಿಗೆ ಉತ್ತೇಜನ ನೀಡಲಾಗುವುದು. ಅಲ್ಲದೇ, ವಿದ್ಯುತ್​ ಚಾಲಿತ ಕಾರು ಪಾರ್ಕಿಂಗ್ ಹಾಗೂ ಚಾರ್ಜಿಂಗ್ ವ್ಯವಸ್ಥೆ ಮಾಡಲಾಗುವುದು. ವಿದ್ಯುತ್​ ಚಾಲಿತ ವಾಹನಗಳು ಒಮ್ಮೆ ಚಾರ್ಜ್ ಆದರೆ 140 ಕಿ.ಮೀ. ಸಂಚರಿಸುವ ಸಾಮರ್ಥ್ಯ ಹೊಂದಿರುತ್ತವೆ. ಆದ್ದರಿಂದ 6 ಕಿ.ಮೀ.ವ್ಯಾಪ್ತಿಯಲ್ಲಿ ಪಾರ್ಕಿಂಗ್ ಹಾಗೂ ಚಾರ್ಜಿಂಗ್ ವ್ಯವಸ್ಥೆ ಮಾಡಿ ನಿರ್ಮಿಸಲಾಗುವುದು ಎಂದು ಹೇಳಿದರು.

Intro:ಮಂಗಳೂರು: ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಅಧೀನದಲ್ಲಿ ರಾಜ್ಯದ ಎಲ್ಲಾ ಮೆಡಿಕಲ್ ಸೈನ್ಸ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜುಗಳು ನಡೆಯುತ್ತಿವೆ. ಆದ್ದರಿಂದ ಅದರ ವಲಯ ಕಚೇರಿಯೊಂದನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಸರಕಾರ ತೀರ್ಮಾನಿಸಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದರು.

ವಿದ್ಯಾರ್ಥಿ ಪ್ರತಿಯೊಂದು ಕಚೇರಿ ವಿಷಯಗಳಿಗಾಗಿ ಬೆಂಗಳೂರಿಗೆ ಹೋಗಿ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಸ್ಯೆಗಳ ಪರಿಹಾರಕ್ಕಾಗಿ ರಾಜೀವ ಗಾಂಧಿ ವಿವಿಯ ವಲಯ ಕಚೇರಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಸಮೀಪದಲ್ಲೇ ನಿರ್ಮಿಸಲು ಚಿಂತನೆ ಮಾಡಲಾಗಿದೆ ಎಂದು ಅವರು ಹೇಳಿದರು‌.

Body:ಮೆಡಿಕಲ್ ಕಾಲೇಜು ಹಾಗೂ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗಳನ್ನೂ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ವಿವಿಯಲ್ಲಿ 5 ಎಕರೆ ಸ್ಥಳವನ್ನು ಕೇಳಿಕೊಳ್ಳಲಾಗಿದೆ. ಅಲ್ಲಿ ಬೇಕಾದ ಸ್ಥಳ ಲಭ್ಯವಾದಲ್ಲಿ ತಕ್ಷಣ ಕಾಮಗಾರಿ ನಡೆಸಲಾಗುವುದು. ಈ ಬಗ್ಗೆ ಸಿಂಡಿಕೆಟ್ ಸಭೆಯೊಂದನ್ನು ಆಯೋಜಿಸಿ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.

ಇಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನೆ: ಖಾದರ್

ಭವಿಷ್ಯದಲ್ಲಿ ಪರಿಸರ ಸ್ನೇಹಿ ವಾಹನಗಳು ಬರುತ್ತಿರುವ ಸೂಚನೆ ಸ್ಪಷ್ಟವಾಗಿದ್ದು, ಈ ಸಂಬಂಧ ಇಲೆಕ್ಟ್ರಿಕ್ ಕಾರು, ಆಟೋ, ಸ್ಕೂಟರ್ ಗಳಿಗೆ ಉತ್ತೇಜನ ನೀಡುವ ಸಲುವಾಗಿ ಮನಪಾ ವ್ಯಾಪ್ತಿಯಲ್ಲಿ ಇಲೆಕ್ಟ್ರಿಕ್ ಕಾರ್ ಪಾರ್ಕಿಂಗ್ ಹಾಗೂ ಚಾರ್ಜಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವ ಖಾದರ್ ತಿಳಿಸಿದರು.

ಇಲೆಕ್ಟ್ರಿಕ್ ವಾಹನಗಳು ಒಮ್ಮೆ ಚಾರ್ಜ್ ಆದರೆ 140 ಕಿ.ಮೀ. ಸಂಚರಿಸುವ ಸಾಮರ್ಥ್ಯ ಹೊಂದಿರುತ್ತದೆ. ಆದ್ದರಿಂದ 6 ಕಿ.ಮೀ.ವ್ಯಾಪ್ತಿಯಲ್ಲಿ ಪಾರ್ಕಿಂಗ್ ಹಾಗೂ ಚಾರ್ಜಿಂಗ್ ವ್ಯವಸ್ಥೆ ಮಾಡಿ ಯೋಜನೆ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಯು.ಟಿ.ಖಾದರ್ ಹೇಳಿದರು.

Reporter_Vishwanath Panjimogaru

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.