ಬೆಳ್ತಂಗಡಿ: ಗ್ರಾಮ ಪಂಚಾಯತ್ ಗಡಿ ಗೊಂದಲ ಎಂಬ ತ್ಯಾಜ್ಯ ಕುರಿತಾಗಿ ಈಟಿವಿ ಭಾರತ್ನ ವರದಿಗೆ ಸ್ಪಂದಿಸಿರುವ ಮುಂಡಾಜೆ ಗ್ರಾಮ ಪಂಚಾಯತ್ ವಿಲೇವಾರಿ ಮಾಡಿ ಸ್ವಚ್ಛಗೊಳಿಸಿದ್ದಾರೆ.
ತಾಲೂಕಿನ ಮುಂಡಾಜೆ ಹಾಗೂ ಚಾರ್ಮಾಡಿ ಗ್ರಾಮ ಪಂಚಾಯತ್ಗಳ ಗಡಿ ಗೊಂದಲದಿಂದ, ನದಿಯಲ್ಲಿ ಹಾಗೂ ರಸ್ತೆ ಬದಿಯಲ್ಲಿ ಬಿಸಾಡಿರುವ ತ್ಯಾಜ್ಯ ಕೊಳೆತು ಮಾರಕ ಸಾಂಕ್ರಾಮಿಕ ರೋಗ ಹರಡಲು ಕಾರಣವಾಗುತ್ತಿದೆ ಎಂಬ ವಿಸ್ತೃತ ವರದಿಯನ್ನು ಎರಡು ದಿನಗಳ ಹಿಂದೆ ಈಟಿವಿ ಭಾರತ್ ಪ್ರಕಟಿಸಿತ್ತು. ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾದ ಮುಂಡಾಜೆ ಗ್ರಾಮ ಪಂಚಾಯತ್ ಸಿಬ್ಬಂದಿ ದುರ್ವಾಸನೆ ಬೀರುತ್ತಿದ್ದ ತ್ಯಾಜ್ಯವನ್ನು ವಿಲೇವಾರಿ ಮಾಡಿ ಸ್ವಚ್ಛಗೊಳಿಸಿದ್ದಾರೆ.
ಪಂಚಾಯತ್ ಗಡಿ ಗೊಂದಲದಿಂದ ತ್ಯಾಜ್ಯ ವಿಲೇವಾರಿಗೆ ಸಮಸ್ಯೆ.. ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ!!
ತ್ಯಾಜ್ಯವಿದ್ದ ಸ್ಥಳ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವುದರಿಂದ ಅವರು ಅದಕ್ಕೆ ಬೇಕಾದ ವ್ಯವಸ್ಥೆ ಮಾಡಬೇಕಾಗಿತ್ತು. ಆದರೆ ಅವರು ಮಾಡಬೇಕಿದ್ದ ಕೆಲಸವನ್ನು ನಾವು ಮಾಡಿದ್ದೇವೆ ಎಂದು ಮುಂಡಾಜೆ ಪಂಚಾಯತ್ ಸಿಬ್ಬಂದಿಯೊಬ್ಬರು ತಿಳಿಸಿದರು. ಆ ಪರಿಸರ ಸ್ವಚ್ಛಗೊಳಿಸಿದ್ದರಿಂದ ಸಾರ್ವಜನಿಕರು ನೆಮ್ಮದಿಯಿಂದ ಓಡಾಡುವಂತಾಗಿದೆ. ವರದಿಯ ಮೂಲಕ ಅಧಿಕಾರಿಗಳನ್ನು ಎಚ್ಚರಿಸಿದ ಈಟಿವಿ ಭಾರತ್ಗೆ ಸಾರ್ವಜನಿಕರು ಅಭಿನಂದನೆ ತಿಳಿಸಿದ್ದಾರೆ.