ETV Bharat / state

ಡಿಸಿಯಾಗಿ ಕರ್ತವ್ಯದಲ್ಲಿದ್ದಾಗ ಪ್ರತಿದಿನವೂ ವಿನೂತನವಾಗಿತ್ತು : ಸಿಂಧೂ ಬಿ. ರೂಪೇಶ್ - :Sindus b. Rupesh

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಅದ್ಧೂರಿಯಾಗಿ ಬೀಳ್ಕೊಡುಗೆ ನೀಡಲಾಯಿತು.

ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

author img

By

Published : Jul 31, 2020, 12:06 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕರ್ತವ್ಯದಲ್ಲಿದ್ದಾಗ ಪ್ರತಿ ದಿನವೂ ವಿನೂತನವಾಗಿತ್ತು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಒಂದಿಲ್ಲೊಂದು ಸಮಸ್ಯೆ, ಸವಾಲು, ಘಟನೆಗಳು ಪ್ರತಿದಿನ ಬರುತ್ತಿದ್ದವು. ಎಲ್ಲರ ಸಹಕಾರದಿಂದ ಇವುಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಪ್ರಯತ್ನಿಸಿದ್ದೇನೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿದರೆ, ಅವರಲ್ಲಿ ಉಂಟಾಗುವ ನೆಮ್ಮದಿಯು ನಮ್ಮಲ್ಲಿ ಸಾರ್ಥಕತೆ ಮೂಡಿಸುತ್ತದೆ. ಪ್ರತಿಯೊಬ್ಬ ಸರ್ಕಾರಿ ನೌಕರರು ಈ ದಿಸೆಯಲ್ಲಿ ಮುಂದುವರಿಯಬೇಕು ಎಂದು ಹೇಳಿದರು.

ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ
ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಕೊರೊನಾ ನಿರ್ವಹಣೆಯು ದೊಡ್ಡ ಸವಾಲಾಗಿತ್ತು. ಇದರೊಂದಿಗೆ ಸಾರ್ವಜನಿಕರ ಸಮಸ್ಯೆಗಳಿಗೂ ಪರಿಹಾರ ನೀಡುವ ಹೊಣೆಯೂ ಇತ್ತು. ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಾಕಷ್ಟು ಪ್ರಗತಿ ಕಂಡಿದೆ. ಕೊರೊನಾ ವಿರುದ್ಧ ಇನ್ನಷ್ಟು ಹೋರಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಮಾತನಾಡಿ, ಸಿಂಧೂ ರೂಪೇಶ್ ಅವರು ಜಿಲ್ಲಾಧಿಕಾರಿಯಾಗಿ 11 ತಿಂಗಳ ಸೇವೆಯಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ. ನೆರೆ, ಕೋವಿಡ್ ನಿರ್ವಹಣೆ, ವಲಸೆ ಕಾರ್ಮಿಕರ ರವಾನೆ, ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಚಾರ ಮತ್ತಿತರ ಘಟನೆಗಳಲ್ಲಿ ಸೂಕ್ತ ಸಂದರ್ಭದಲ್ಲಿ ನಿರ್ಣಾಯಕ ನಿರ್ಧಾರವನ್ನು ಸಿಂಧೂ ಬಿ. ರೂಪೇಶ್ ಅವರು ಕೈಗೊಂಡಿದ್ದಾರೆ. ಅಬ್ಬಕ್ಕ ಉತ್ಸವ, ಕರಾವಳಿ ಉತ್ಸವಗಳಲ್ಲಿ ಹಣಕಾಸು ಶಿಸ್ತನ್ನು ಜಾರಿಗೆ ತಂದಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.