ETV Bharat / state

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ : ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ದಿನಗಳಲ್ಲಿ ಹಿಂದೂ ಕಾರ್ಯಕರ್ತರು ಎಚ್ಚರಿಕೆಯಿಂದ ಇರಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
author img

By

Published : May 19, 2023, 6:58 PM IST

ಪೊಲೀಸರು ಕಾನೂನು ಪ್ರಕಾರ ಕೆಲಸ ಮಾಡಲಿ.

ಪುತ್ತೂರು (ದಕ್ಷಿಣ ಕನ್ನಡ) : ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿ ಹಿಂದೂ ಕಾರ್ಯಕರ್ತನನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭೇಟಿ ಮಾಡಿದ್ದಾರೆ. ಈ ವಿಚಾರವಾಗಿ ಖುದ್ದು ಸ್ವತಃ ಪುತ್ತೂರಿಗೆ ಬಂದ ಬಸನಗೌಡ ಪಾಟೀಲ್ ಯತ್ನಾಳ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತನನ್ನು ಭೇಟಿ ಮಾಡಿ ವಿಚಾರಿಸಿದ್ದಾರೆ.

ಬಳಿಕ ಆಸ್ಪತ್ರೆಯಿಂದ ಹೊರಬಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಈ ಘಟನೆಯ ಬಗ್ಗೆ ವಾಸ್ತವಿಕ ತನಿಖೆಯಾಗಬೇಕು. ಪೊಲೀಸರಿಂದ ಹಲ್ಲೆಗೊಳಗಾಗಿರುವ ನಮ್ಮ ಕಾರ್ಯಕರ್ತರು ತಾಲಿಬಾನಿಗಳಲ್ಲ, ಯಾವುದೇ ದೇಶ ವಿರೋದಿ ಚಟುವಟಿಕೆ ಮಾಡಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ. ಯಾವುದೇ ದೂರು ಬಂದರು ಮೊದಲು ಅದರ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು. ಈ ರೀತಿ ಪೊಲೀಸರು ದೌರ್ಜನ್ಯ ದಿಂದ ಪೊಲೀಸ್​ ಇಲಾಖೆಗೆ ಗೌರವ ತರುವಂತದ್ದಲ್ಲ ಎಂದು ಹೇಳಿದರು.

ಇದನ್ನೂ ಓದಿ : ಕಟೀಲ್, ಡಿವಿಎಸ್ ಭಾವಚಿತ್ರಕ್ಕೆ ಅವಮಾನ: ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯದ ಸತ್ಯಾಸತ್ಯತೆ ಪರಿಶೀಲನೆ- ಎಸ್​ಪಿ

ಡಿಎಸ್​ಪಿ ಈಗಾಗಲೇ ಅಧಿಕಾರಗಳನ್ನು ಸಸ್ಪೆಂಡ್​ ಮಾಡಿದ್ದಾರೆ. ಕೂಡಲೆ ಡಿಎಸ್​ಪಿ ಅವರನ್ನು ಸಸ್ಪೆಂಡ್​ ಮಾಡಬೇಕು. ಯಾರೋ ಒತ್ತಡ ಹಾಕಿದ್ದಾರೆ ಎಂದು ಊಹಾಪೋಹಗಳನ್ನು ಮಾಡಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಪೋಲೀಸರು ಕಾನೂನು ಪ್ರಕಾರ ಕೆಲಸ ಮಾಡಲಿ. ನಾಳೆ‌ ಕಾಂಗ್ರೆಸ್​​ನವರು ಕೊಲೆ ಮಾಡಿ ಎಂದರೆ ಪೋಲೀಸರು ಕೊಲೆ ಮಾಡುತ್ತಾರೆಯೇ ? ಕಾಂಗ್ರೆಸ್​ ಸರಕಾರ ಬಂದ ಬಳಿಕ ಕೆಲವು ಪೊಲೀಸ್​ ಅಧಿಕಾರಿಗಳು ಈ ರೀತಿ ನಡೆದುಕೊಳ್ಳಲು ಆರಂಭಿಸಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು.

ಇದನ್ನೂ ಓದಿ : ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬಗ್ಗೆ ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆ: ಬಿಜೆಪಿಯಿಂದ ದೂರು, ಪ್ರತಿಭಟನೆ

ಇನ್ನು ಮುಂದೆ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ದೊಡ್ಡ ಸವಾಲುಗಳಿವೆ. ಏಕೆಂದರೇ ನಾಳೆಯಿಂದ ಕಾಂಗ್ರೆಸ್​ನ ತಾಲಿಬಾನ್ ಸರಕಾರ ಅಧಿಕಾರಕ್ಕೆ ಬರುತ್ತಿದೆ. ಈ ಹಿಂದೆ ಕಾಂಗ್ರೆಸ್​ ಅಧಿಕಾರ ಅವಧಿಯಲ್ಲಿ ನಮ್ಮ ಹಿಂದೂ ಕಾರ್ಯಕರ್ತರ, ಗೋ ರಕ್ಷಕರ ಮಾರಣಹೋಮ ರಾಜ್ಯದಲ್ಲಿ ನಡೆದಿದೆ. ಮತ್ತೊಮ್ಮೆ ಅದೆ ನಾಯಕತ್ವದಲ್ಲಿ ಸರಕಾರ ಬರುವುದರಿಂದ ಇಡೀ ರಾಜ್ಯದಲ್ಲಿ ನಮ್ಮನ್ನು ಯಾರು ಕೇಳುವುದಿಲ್ಲ ಎಂದು ಕಾರ್ಯಕರ್ತರಲ್ಲಿ ಅನಾಥ ಪ್ರಜ್ಞೆ ಕಾಡುತ್ತಿದೆ. ಹಿಂದೂ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಇದು ಕಾಂಗ್ರೆಸ್​ ಕಿತಾಪತಿ : ಇದಕ್ಕು ಮೊದಲು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರ್ಯಕರ್ತರನ್ನು ಆರ್​ಎಸ್​ಎಸ್​ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಪುತ್ತೂರಿನಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ ನೂರಕ್ಕೆ ನೂರು ಕಾಂಗ್ರೆಸ್ ಮಾಡಿದ ಕಿತಾಪತಿ ಎಂದು ಗಂಭೀರವಾಗಿ ಆರೋಪಿಸಿದರು.

ಇದನ್ನೂ ಓದಿ : ಪುತ್ತೂರಿನಲ್ಲಿ ಪೊಲೀಸ್​​ ದೌರ್ಜನ್ಯ ಪ್ರಕರಣ: ಇದು ಕಾಂಗ್ರೆಸ್​ ಕಿತಾಪತಿ- ಕಲ್ಲಡ್ಕ ಪ್ರಭಾಕರ ಭಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.