ಪುತ್ತೂರು : ಪುತ್ತೂರು ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ ಆಗಿರುವ ತಹಶೀಲ್ದಾರ್ ಟಿ.ರಮೇಶ್ ಬಾಬುರವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಗುರುವಾರ ಮಂಗಳೂರು ಸೈಬರ್ ಕ್ರೈಮ್ಗೆ ದೂರು ನೀಡಿದ್ದಾರೆ.
ತಹಶೀಲ್ದಾರ್ ರಮೇಶ್ ಬಾಬುರವರ ಹೆಸರಿನಲ್ಲಿ ಇತ್ತೀಚೆಗೆ ಯಾರೋ ಫೇಸ್ಬುಕ್ ಖಾತೆ ತೆರೆದಿದ್ದು, ಹಲವರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾರೆ.
ರಿಕ್ವೆಸ್ಟ್ ಒಪ್ಪಿದ ಗ್ರಾಮಕರಣಿಕರು, ಸಾಮಾಜಿಕ ಕಾರ್ಯಕರ್ತರು ಸಹಿತ ಹಲವರಿಗೆ ಇದೇ ಫೇಸ್ಬುಕ್ ಅಕೌಂಟಿನಿಂದ ಸಂದೇಶ ಕಳುಹಿಸಿ ತುರ್ತಾಗಿ ಹಣ ಬೇಕಿರುವುದರಿಂದ ತಕ್ಷಣ ಗೂಗಲ್ ಪೇ ಮಾಡುವಂತೆ ಕೇಳಲಾಗಿದೆ.
ಈ ಮಾಹಿತಿ ತಿಳಿದ ತಹಶೀಲ್ದಾರರು ತನ್ನ ಹೆಸರಿನಲ್ಲಿ ಯಾರೋ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಡಿರುವ ಬಗ್ಗೆ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.