ಮಂಗಳೂರು: ನಗರದ ಗುರುಪುರ ಬಳಿಯ ಬಂಗ್ಲಗುಡ್ಡ ಪ್ರದೇಶದಲ್ಲಿ ಗುಡ್ಡ ಕುಸಿತದಿಂದ 14 ಮನೆಗಳು ಅಪಾಯದ ಅಂಚಿನಲ್ಲಿದ್ದು, ತಕ್ಷಣ ಆಶ್ರಯ ಕೇಂದ್ರ ತೆರೆದು ಇಲ್ಲಿನ ನಿವಾಸಿಗಳನ್ನು ಅಲ್ಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ದ.ಕ. ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪ್ರಕರಣ ನಡೆದ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಮಕ್ಕಳ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಅವರು, ಈ ಬಗ್ಗೆ ಗ್ರಾಮ ಕರಣಿಕರಿಗೆ ವರದಿ ಸಂಗ್ರಹಿಸಲು ತಿಳಿಸಲಾಗಿದೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ವ್ಯವಸ್ಥೆ ಮಾಡಲಾಗಿದೆ.
ಇಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟುವವರೆಗೆ ಮನೆ ಬಾಡಿಗೆ ಕೊಡುವ ವ್ಯವಸ್ಥೆ ಮಾಡಲಾಗುತ್ತದೆ. ಮುಂದೆ ಅವರು ಮನೆ ಕಟ್ಟಲು ಇಲ್ಲಿ ಸ್ಥಳಾವಕಾಶವಿಲ್ಲ. ಆದ್ದರಿಂದ ಪಕ್ಕದ ಪಂಚಾಯತ್ ಮೂಳೂರಿನಲ್ಲಿ ವ್ಯವಸ್ಥೆ ಮಾಡಿ ಹಕ್ಕು ಪತ್ರಗಳನ್ನು ಕೊಡಲಾಗುತ್ತದೆ ಎಂದರು.