ಮಂಗಳೂರು: ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ವಿರೋಧಿಸಿ ನಗರದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳಿಂದ ಹೆದ್ದಾರಿ ತಡೆ ನಡೆಸಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಾಗೂ ಕಾರ್ಮಿಕರಿಗೆ ವಿರೋಧಿಯಾದ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿವೆ ಎಂದು ಆರೋಪಿಸಿ, ರೈತ,ಕಾರ್ಮಿಕ, ದಲಿತ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳು ಹಾಗೂ ಕಾಂಗ್ರೆಸ್ , ಸಿಪಿಎಂ, ಸಿಪಿಐ, ಜೆಡಿಎಸ್ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದವು.
ರಸ್ತೆ ತಡೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರುಗಳು, ಸುಗ್ರೀವಾಜ್ಞೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ. ಆರ್. ಲೋಬೋ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಸಿಪಿಎಂ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ವಸಂತ ಆಚಾರಿ, ಸಿಪಿಐ ಮುಖಂಡರಾದ ಹೆಚ್. ವಿ. ರಾವ್, ಬಿ ಶೇಖರ್, ವಿ ಕುಕ್ಯಾನ್ ಮೊದಲಾದವರು ಭಾಗಿಯಾಗಿದ್ದರು.