ETV Bharat / state

ಬೆಳ್ತಂಗಡಿ ಆತ್ಮಹತ್ಯೆ ಯತ್ನ ಪ್ರಕರಣ: ತಂದೆ, ಮಗು ಸಾವು - ಮಗುವಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆ ಸುದ್ದಿ

ನ.2ರಂದು ಮಗುವಿಗೆ ವಿಷವುಣಿಸಿ, ದಂಪತಿ ತಾವು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಂದು ತಂದೆ ಮತ್ತು ಮಗು ಸಾವನ್ನಪ್ಪಿದ್ದಾರೆ. ಪತ್ನಿ ಸ್ಥಿತಿ ಚಿಂತಾಜನಕವಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

father and son dies in beltangadi news
ಬೆಳ್ತಂಗಡಿ ಆತ್ಮಹತ್ಯೆ ಯತ್ನ
author img

By

Published : Nov 3, 2020, 2:04 PM IST

ಬೆಳ್ತಂಗಡಿ: ಮಗುವಿಗೆ ವಿಷವುಣಿಸಿ, ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ಕೊಕ್ರಾಡಿ ಸಮೀಪ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಗು ಹಾಗೂ ತಂದೆ ಮೃತಪಟ್ಟಿದ್ದಾರೆ.

ಕೊಕ್ರಾಡಿಯ ಅತ್ರಿಜಾಲು ಸಮೀಪದ ದಂಪತಿ ತಮ್ಮ ಪುತ್ರಿಗೆ ವಿಷವುಣಿಸಿ, ಬಳಿಕ ತಾವೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ನ.2ರಂದು ಸಂಜೆ ನಡೆದಿತ್ತು. ಕೂಡಲೇ ಸ್ಥಳೀಯರು ಮೂವರನ್ನೂ ಕಾರ್ಕಳದ ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ 5 ವರ್ಷದ ಮಗು ಹಾಗೂ ಮಗುವಿನ ತಂದೆ ಇಂದು ಸಾವನ್ನಪ್ಪಿದ್ದಾರೆ. ಮಗುವಿನ ತಾಯಿಯ ಸ್ಥಿತಿಯೂ ಗಂಭೀರವಾಗಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ.

ಮನೆಯಲ್ಲಿ ಡೆತ್‍ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ವೇಣೂರು ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.