ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಎಎ ಬಗ್ಗೆ ತಿಳುವಳಿಕೆ ನೀಡಲು ಫೆಬ್ರವರಿ 6 ರಂದು ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಕುಲಶೇಖರದ ಕಾರ್ಡೆಲ್ ಸಭಾಂಗಣದಲ್ಲಿ ಸಿಎಎ ಬಗ್ಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿರುವ ಕಾರ್ಯಾಗಾರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್, ವಿಧಾನಪರಿಷತ್ ಮಾಜಿ ಸಭಾಪತಿ ಬಿ. ಎಲ್. ಶಂಕರ್, ಸಾಮಾಜಿಕ ಹೋರಾಟಗಾರ್ತಿ ಭವ್ಯ ನರಸಿಂಹಮೂರ್ತಿ ಸಿಎಎ ಬಗ್ಗೆ ತಿಳಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು, ಕಾಂಗ್ರೆಸ್ನಿಂದ ಆಯ್ಕೆಯಾದ ಜನಪ್ರತಿನಿಧಿಗಳು ಮತ್ತು ಆಸಕ್ತ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲು ಅವಕಾಶವಿದ್ದು, ಸುಮಾರು 1250 ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.