ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾರಾವಿಯ ಈ ವ್ಯಕ್ತಿ ದೀರ್ಘ ಕಾಲದ ಮೂತ್ರಕೋಶ ಹಾಗೂ ಯಕೃತ್ತಿನ ಸಮಸ್ಯೆಯಿಂದಾಗಿ ಮೃತಪಟ್ಟಿದ್ದರು. ಈ ವ್ಯಕ್ತಿಯನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಅವರ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಿದ್ದು, ಇಂದು ಅದರ ವರದಿ ಲಭ್ಯವಾಗಿದ್ದು, ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
ಜಿಲ್ಲೆಯ ಕೋವಿಡ್ ಚಿತ್ರಣ:
ಕೋವಿಡ್ -19 ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 138 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದೆ. ಈ ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 246 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 242 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು, ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ. 531 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 17 ಮಂದಿ ಅಬ್‌ಸರ್ವೇಷನ್‌ನಲ್ಲಿದ್ದಾರೆ. 24 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್ ನಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, 47 ಮಂದಿಯನ್ನು ಸುರತ್ಕಲ್ ನ ಎನ್ಐಟಿಕೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ವೆನ್ಲಾಕ್ ಆಸ್ಪತ್ರೆಯ ಕ್ವಾರಂಟೈನ್ ನಲ್ಲಿ ಯಾರೂ ಇಲ್ಲ. 6,073 ಮಂದಿ 28 ದಿನಗಳ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. ಇಂದು ಯಾರನ್ನೂ ಸ್ಕ್ರೀನಿಂಗ್ ಮಾಡಲಾಗಿಲ್ಲ. ಮಂಗಳೂರಲ್ಲಿ ಈವರೆಗೆ 42,078 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ. ಈವರೆಗೆ 7,025 ಮಂದಿಯ ಗಂಟಲು ದ್ರವ ಪಡೆಯಲಾಗಿದೆ. ಈವರೆಗೆ 6,265 ಮಂದಿಯ ವರದಿ ಬಂದಿದ್ದು, ಅದರಲ್ಲಿ 6,195 ಮಂದಿಯ ವರದಿಯಲ್ಲಿ ನೆಗೆಟಿವ್ ಬಂದಿದೆ. 70 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 26 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 37 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.