ಹೊಸಬೆಟ್ಟು: ಸುರತ್ಕಲ್ ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿಯ ಕೋಡ್ದಬ್ಬು ದೇವಸ್ಥಾನದ ಮುಂಭಾಗದ ರಸ್ತೆಯ ಬದಿಯಲ್ಲಿ ಎರಡು ಕೋಣಗಳು ಮೃತಪಟ್ಟ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿವೆ.
ಕೈ, ಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಭಾನುವಾರ ಸ್ಥಳೀಯ ನಿವಾಸಿಗಳಿಗೆ ರಸ್ತೆ ಬದಿಯಲ್ಲಿ ಕೋಣಗಳನ್ನು ಪ್ಲಾಸ್ಟಿಕ್ ಶೀಟ್ನಲ್ಲಿ ಮುಚ್ಚಿರುವ ಸ್ಥಿತಿಯಲ್ಲಿ ಕಂಡು ಬಂದಿದೆ.
ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ.
ಈ ಸಂದರ್ಭದಲ್ಲಿ ಸ್ಥಳೀಯರು ಅಕ್ರಮ ಗೋ ಕಳ್ಳರನ್ನು ಪತ್ತೆ ಹಚ್ಚಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಬಳಿಕ ಕೋಣಗಳ ಮೃತ ದೇಹವನ್ನು ಸಂಘಟನೆಯ ಕಾರ್ಯಕರ್ತರು ಹಾಗೂ ಪೊಲೀಸರ ನೇತೃತ್ವದಲ್ಲಿ ಸುಡಲಾಯಿತು.
ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.